ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ | Dharwad Lokayukta Inspector Panchakshari Salimath Burned Alive Car Accident San

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ | Dharwad Lokayukta Inspector Panchakshari Salimath Burned Alive Car Accident San


ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಅವರು ಕಾರಿನೊಳಗೆ ಸಿಲುಕಿ ಸಜೀವ ದಹನವಾಗಿದ್ದಾರೆ.

ಧಾರವಾಡ (ಡಿ.5): ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗದೇ ಇದ್ದಿದ್ದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ. ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



Source link

Leave a Reply

Your email address will not be published. Required fields are marked *