Guest teacher honorarium issue: 5 ತಿಂಗಳಿಂದ ಗೌರವ ಧನ ಇಲ್ಲದೆ 34000 ಅತಿಥಿ ಶಿಕ್ಷಕರಿಗೆ ಸಂಕಷ್ಟ | 34 000 Guest Teachers In Karnataka No Honorarium For 5 Months

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 34 ಸಾವಿರ ಅತಿಥಿ ಶಿಕ್ಷಕರಿಗೆ ಕಳೆದ ಐದು ತಿಂಗಳಿಂದ ಗೌರವಧನ ಪಾವತಿಯಾಗಿಲ್ಲ. ಮಾಸಿಕ ಕೇವಲ 1000 ರೂ. ಗೌರವಧನವನ್ನೂ ಸರ್ಕಾರ ನೀಡದೆ ಸತಾಯಿಸುತ್ತಿದ್ದು, ಇದರಿಂದ ಶಿಕ್ಷಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು (ಮಾ.6): ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 34 ಸಾವಿರ ಅತಿಥಿ ಶಿಕ್ಷಕರಿಗೆ ಕಳೆದ ಐದು ತಿಂಗಳಿಂದ ಗೌರವ ಧನ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅತಿಥಿ ಶಿಕ್ಷಕರಿಗೆ ಸರ್ಕಾರ ಮಾಸಿಕ ಕೇವಲ 1000 ರು. ಗೌರವಧನ ನೀಡುತ್ತಿದೆ. ಆದರೆ, ಅದನ್ನೂ ಪ್ರತೀ ತಿಂಗಳು ನೀಡುತ್ತಿಲ್ಲ. ಹೀಗಾದರೆ ನಾವು ಜೀವನ ನಡೆಸುವುದು ಹೇಗೆ? ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ಗೌರವಧನ 2000 ಏರಿಸಿ ಆದೇಶ

ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಅತಿಥಿ ಶಿಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಎರಡೂ ಸೇರಿ ಸುಮಾರು 48 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಇತ್ತೀಚೆಗಷ್ಟೇ ಗೌರವಧನ ನೀಡಲಾಗಿದೆ. ಆದರೆ, ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಕಳೆದ ನವೆಂಬರ್‌ ತಿಂಗಳಿಂದ ಇಲ್ಲಿಯವರೆಗೆ ಗೌರವಧನ ನೀಡದೆ ಸುಮಾರು 40 ಕೋಟಿ ರು.ಯಷ್ಟು ಬಾಕಿ ಉಳಿಸಿಕೊಂಡಿದೆ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *