Minister Shivaraj Tangadagi health: ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು | Minister Shivraj Thangadgi Suffers From Chest Pain Admitted To Siddaganga Hospital

Minister Shivaraj Tangadagi health: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: 

ತುಮಕೂರು: ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಚಿವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಾರ್ಗಮಧ್ಯೆ ಸಿಗುವ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯ ಎಮರ್ಜೆನ್ಸಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಇದನ್ನೂ ಓದಿ: ಗಂಡನ ಸಾವನ್ನು ಆತ್ಮ*ಹತ್ಯೆ ಎಂದು ಬಿಂಬಿಸಿದ ಪತ್ನಿ: ಸಿಸಿಟಿವಿಯಿಂದ ಸಿಕ್ತು ಪ್ರಕರಣಕ್ಕೆ ರೋಚಕ ಟ್ವಿಸ್ಟ್

ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲು

ಸಚಿವರು ಕಾರು ಚಾಲಕ ಹಾಗೂ ಗನ್ ಮ್ಯಾನ್ ಜೊತೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮಾರ್ಗಮಧ್ಯೆ ಸಿಗುವ ತುಮಕೂರು ನಗರದ ಬಿಹೆಚ್ ರಸ್ತೆಯಲ್ಲಿರುವ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾತ್ರಿ 10 ಗಂಟೆ ಸುಮಾರಿಗೆ ಸಚಿವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬೆಕ್ಕು ಸಾಕೋದು ಬೇಡ ಎಂದಿದ್ದಕ್ಕೆ ಕೆಲ ದಿನಗಳಲ್ಲಿ ಡಾಕ್ಟರ್ ಆಗೋಳಿದ್ದ MBBS ವಿದ್ಯಾರ್ಥಿನಿ ಸಾವಿಗೆ ಶರಣು

Source link

Leave a Reply

Your email address will not be published. Required fields are marked *