Headlines

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ, ಯಾರು ಈ ಸಿಪಿ ರಾಧಾಕೃಷ್ಣನ್? | Nda Announces Maha Governor Cp Radhakrishnan As Its Candidate For Vice President

ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಅಭ್ಯರ್ಥಿ ಘೋಷಿಸಿದೆ. ಮಹಾರಾಷ್ಟ್ರ ರಾಜ್ಯಪಾಲರಾಗಿರುವ ಸಿಪಿ ರಾಧಾಕೃಷ್ಣನ್ ಹೆಸರನ್ನು ಎನ್‌ಡಿಎ ಘೋಷಿಸಿದೆ

ನವದೆಹಲಿ (ಆ.17) ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಅಭ್ಯರ್ಥಿ ಆಯ್ಕೆ ಕುರಿತು ಸಭೆ ಸೇರಿದ್ದ ಬಿಜೆಪಿ ಸುದೀರ್ಘ ಚರ್ಚೆ ಬಳಿಕ ಅಭ್ಯರ್ಥಿ ಘೋಷಿಸಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಹೆಸರು ಘೋಷಿಸಲಾಗಿದೆ. ತಮಿಳುನಾಡು ಮೂಲದ ಸಿಪಿ ರಾಧಕೃಷ್ಣನ್ ಹೆಸರು ಘೋಷಣೆಗೆ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದೆ.

ತಮಿಳುನಾಡು ಮೂಲದ ಸಿಪಿ ರಾಧಾಕೃಷ್ಣನ್

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಗಮನಸೆಳೆದಿದ್ದ ಸಿಪಿ ರಾಧಾಕೃಷ್ಣನ್ ಬಳಿಕ ಕೊಯಂಬತ್ತೂರಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ರಾಜಕೀಯ ಜೀವನದ ನಿಸ್ವಾರ್ಥ ಸೇವೆ ಸಲ್ಲಿಸಿದ ಸಿಪಿ ರಾಧಕೃಷ್ಣನ್ ಅವರನ್ನು ಬಿಜೆಪಿ ರಾಜ್ಯಾಪಾಲರಾಗಿ ನೇಮಕ ಮಾಡಿತ್ತು. ಪುದುಚೇರಿ, ಜಾರ್ಖಂಡ್ ಹಾಗೂ ಸದ್ಯ ಮಹಾರಾಷ್ಟ್ರ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳುನಾಡು ಮೂಲದ ರಾಧಾಕೃಷ್ಣನ್ ಅಭ್ಯರ್ಥಿ ಘೋಷಣೆ ಹಿಂದೆ ತಮಿಳುನಾಡು ಚುನಾವಣೆ ರಣತಂತ್ರವೂ ಅಡಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಸಿಪಿ ರಾಧಾೃಷ್ಣನ್ ತಮ್ಮ 16ನೇ ವಯಸ್ಸಿನಿಂದ ಆರ್‌ಎಸ್‌ಎಸ್ ಸ್ವಯಂ ಸೇವಕರಾಗಿದ್ದಾರೆ. ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

Source link

Leave a Reply

Your email address will not be published. Required fields are marked *