
ಹೊಂಬಾಳೆ ಫಿಲಂಸ್ ಸಂಸ್ಥೆಯ ‘ಕಾಂತಾರ-1’ ಸಿನಿಮಾ ಜಗತ್ತಿನಾದ್ಯಂತ 7 ಭಾಷೆಗಳಲ್ಲಿ ಬರೋಬ್ಬರಿ 7000ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ರಿಲೀಸ್ ಆಗಿದ್ದು, ಎಲ್ಲಾ ಕಡೆ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲೇ ದಿನವೊಂದಕ್ಕೆ 500ಕ್ಕೂ ಹೆಚ್ಚು ಪ್ರದರ್ಶನ ಆಗುತ್ತಿದೆ.
ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರ ‘ಕಾಂತಾರ ಚಾಪ್ಟರ್ 1’ ಸಿನಿಮಾ ಜಗತ್ತಿನಾದ್ಯಂತ 3 ದಿನದಲ್ಲಿ ಬರೋಬ್ಬರಿ 235 ಕೋಟಿ ಕಲೆಕ್ಷನ್ ಮಾಡಿದೆ. ಹೊಂಬಾಳೆ ಫಿಲಂಸ್ ಸಂಸ್ಥೆಯ ‘ಕಾಂತಾರ-1’ ಸಿನಿಮಾ ಜಗತ್ತಿನಾದ್ಯಂತ 7 ಭಾಷೆಗಳಲ್ಲಿ ಬರೋಬ್ಬರಿ 7000ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ರಿಲೀಸ್ ಆಗಿದ್ದು, ಎಲ್ಲಾ ಕಡೆ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲೇ ದಿನವೊಂದಕ್ಕೆ 500ಕ್ಕೂ ಹೆಚ್ಚು ಪ್ರದರ್ಶನ ಆಗುತ್ತಿದ್ದು, ಇದೀಗ ಕೇವಲ 3 ದಿನದಲ್ಲಿ ರೂ. 235 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.
ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಸಿನಿಮಾ ಜಗತ್ತಿನಾದ್ಯಂತ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಡಿವೈನ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ರಿಷಬ್ ಶೆಟ್ಟಿಯವರ ಕಾಂತಾರ-1 ಚಿತ್ರಕ್ಕೆ ಎಲ್ಲಾ ಕಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಮೊದಲ ದಿನವೇ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆ ದಾಖಲಿಸಿದ್ದ ಕಾಂತಾರ-1 ಸಿನಿಮಾ ಇದೀಗ 235 ವಲ್ಡ್ ವೈಡ್ ಕಲೆಕ್ಷನ್ ಮಾಡಿ ನಾಗಾಲೋಟದಲ್ಲಿ ಮುನ್ನುಗ್ಗುತ್ತಿದೆ. ಸದ್ಯ ಜಗತ್ತಿನಾದ್ಯಂತ ಕಾಂತಾರ ಸಿನಿಮಾದ ಹವಾ ನಡೆಯುತ್ತಿದ್ದು, ಮುಂದೆ ಈ ಸಿನಿಮಾದ ಗಳಿಕೆ 1000 ಕೋಟಿ ದಾಟಿ ದಾಖಲೆ ಬರೆದರೂ ಅಚ್ಚರಿಯೇನಿಲ್ಲ ಎನ್ನಬಹುದು.