Headlines

ಸಂಪುಟ ಪುನಾರಚನೆ ವಿಚಾರ ಗೊತ್ತಿಲ್ಲ ಸಲಹೆ ಕೇಳಿದರೆ ಕೊಡುತ್ತೇನೆ: DCM ಡಿ.ಕೆ.ಶಿವಕುಮಾರ್‌ | Dk Shivakumar Cabinet Reshuffle Decision By Cm Party Gvd

ಸಂಪುಟ ಪುನಾರಚನೆ ವಿಚಾರ ಗೊತ್ತಿಲ್ಲ ಸಲಹೆ ಕೇಳಿದರೆ ಕೊಡುತ್ತೇನೆ: DCM ಡಿ.ಕೆ.ಶಿವಕುಮಾರ್‌ | Dk Shivakumar Cabinet Reshuffle Decision By Cm Party Gvd



ಸಂಪುಟ ಪುನಾರಚನೆ ವಿಚಾರ ಗೊತ್ತಿಲ್ಲ ಸಲಹೆ ಕೇಳಿದರೆ ಕೊಡುತ್ತೇನೆ: DCM ಡಿ.ಕೆ.ಶಿವಕುಮಾರ್‌ | Dk Shivakumar Cabinet Reshuffle Decision By Cm Party Gvd

ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಸಿಎಂಗೆ ಬಿಟ್ಟ ವಿಚಾರ. ನನ್ನ ಜೊತೆ ಚರ್ಚಿಸಿದರೆ ನನ್ನ ಸಲಹೆ ಕೊಡುತ್ತೇನೆ ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಅ.10): ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಸಿಎಂಗೆ ಬಿಟ್ಟ ವಿಚಾರ. ನನ್ನ ಜೊತೆ ಚರ್ಚಿಸಿದರೆ ನನ್ನ ಸಲಹೆ ಕೊಡುತ್ತೇನೆ ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಸಂಪುಟ ಪುನಾರಚನೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೈಕಮಾಂಡ್‌ ಮತ್ತು ಸಿಎಂ ಅವರು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ನಾನು ಮಾತಾಡಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನನ್ನ ಸಲಹೆ ನೀಡುತ್ತೇನೆ. ಈ ವಿಚಾರದಲ್ಲಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ ಎಂದರು. ಸಿಎಂ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿರುವ ಕುರಿತು ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ಬದಲಾವಣೆ ಸಿಎಂ, ಪಕ್ಷಕ್ಕೆ ಬಿಟ್ಟ ವಿಚಾರ: ‘ಬಿಗ್ ಬಾಸ್’ಗೆ ಮತ್ತೆ ಅವಕಾಶ ನೀಡಿದ ಕುರಿತು ಕೇಳಿದಾಗ, ಬುಧವಾರ ರಾತ್ರಿ ಜಿಲ್ಲಾಧಿಕಾರಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿ ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ ಎಂದು ತಿಳಿಸಿದರು.

ಕಸ ಎಸೆಯುವವರ ವಿರುದ್ಧ ಕೇಸ್ ದಾಖಲು

ದಸರಾ ಹಬ್ಬ ಹಾಗೂ ರಜೆಗಳ ಹಿನ್ನೆಲೆ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಇದರ ನಿವಾರಣೆಗೆ ಅಭಿಯಾನ ಕೈಗೊಂಡಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಎಲ್ಲೆಂದರಲ್ಲಿ ಕಟ್ಟಡ ತಾಜ್ಯ ಹಾಗೂ ಕಸ ಎಸೆಯುವವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರನ್ನು ಸ್ವಚ್ಛವಾಗಿಡಲು ಎಲ್ಲೆಂದರಲ್ಲಿ ಸುರಿದಿರುವ ಕಟ್ಟಡ ತಾಜ್ಯ, ಕಸದ ರಾಶಿಯನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಲು ಡಬ್ಬಿಗಳು ಇಟ್ಟಿರುವ ಬಗ್ಗೆ ಪಾಲಿಕೆಗಳ ಆಯುಕ್ತರಿಂದ ವರದಿ ಕೇಳಿದ್ದೇನೆ. ಜಿಬಿಎ ಹಾಗೂ ಐದು ಪಾಲಿಕೆಗಳ ಆಯುಕ್ತರು ಸೇರಿ ಇತರೆ ನಗರಗಳಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಂಬುದನ್ನು ತಿಳಿದುಕೊಂಡು ವರದಿ ನೀಡುವಂತೆ ತಿಳಿಸಿದ್ದೇನೆ. ಎಲ್ಲೆಂದರಲ್ಲಿ ಕಸ ಬಿದ್ದಿದ್ದರೆ ಅದರ ಫೋಟೋ ತೆಗೆದು ಪಾಲಿಕೆಗಳು ಸೂಚಿಸಿರುವ ದೂರವಾಣಿ ಸಂಖ್ಯೆಗೆ ಕಳುಹಿಸಬೇಕು ಎಂದು ಅವರು ಮನವಿ ಮಾಡಿದರು.



Source link

Leave a Reply

Your email address will not be published. Required fields are marked *