Headlines

ಅಪಘಾತಕ್ಕೆ ಮೃತ 10 ತಿಂಗಳ ಮಗುವಿನ ಅಂಗಾಂಗ ದಾನ, ದೇಶದ ಅತಿಕಿರಿಯ ಅಂಗಾಂಗ ದಾನಿ ಹಿರಿಮೆ! | 10 Month Old Baby Becomes Youngest Organ Donor In India Kerala News San

ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಹೆಣ್ಣು ಮಗುವೊಂದು ಮೆದುಳು ನಿಷ್ಕ್ರಿಯಗೊಂಡಿತ್ತು. ದುಃಖದ ನಡುವೆಯೂ, ಮಗುವಿನ ಪೋಷಕರು ತಮ್ಮ ಕಂದನ ಅಂಗಾಂಗಗಳನ್ನು ದಾನ ಮಾಡಿ, ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ತಿರುವನಂತಪುರ (ಫೆ.13): ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಈ ಮೂಲಕ ಅಲಿನ್ ಶೆರಿನ್ ಅಬ್ರಹಾಂ ಎಂಬ 10 ತಿಂಗಳ ಹಸುಗೂಸು ದೇಶದ ಅತಿ ಕಿರಿಯ ಅಂಗಾಂಗ ದಾನಿ ಎನಿಸಿಕೊಂಡಿದೆ.

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಅಲಿನ್ ಶೆರಿನ್ ಅಬ್ರಹಾಂ ಎನ್ನುವ ಮಗು ತಂದೆ- ತಾಯಿ ಜತೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು. ಆದರೆ ಹೆತ್ತ ಮಗುವನ್ನು ಕಳೆದುಕೊಂಡ ದುಃಖದಲ್ಲಿಯೂ ಪಾಲಕರು ಮಗುವಿನ ಮೂತ್ರಪಿಂಡ, ಯಕೃತ್ತು, ಹೃದಯ ಕವಾಟುಗಳನ್ನು ದಾನ ಮಾಡಿದ್ದಾರೆ.

ಈ ಪೈಕಿ ಮೂತ್ರಪಿಂಡವನ್ನು ತಿರುವನಂತಪುರಂನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ವರ್ಷದ ಬಾಲಕಿಗೆ ಕಸಿ ಮಾಡಲಾಗಿದೆ. ಈ ಮಾಹಿತಿಯನ್ನು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಜಾಲತಾಣದಲ್ಲಿ ಹಂಚಿಕೊಂಡು ಮಗುವಿನ ಹೆತ್ತವರಿಗೆ ಧನ್ಯವಾದ ತಿಳಿಸಿದ್ದಾರೆ.

Source link

Leave a Reply

Your email address will not be published. Required fields are marked *