ನವರಾತ್ರಿ 5ನೇ ದಿನ ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಪಂಚಭೂತಗಳಲ್ಲಿ ಲೀನ | Final Rituals Of Kannada Writer Sl Bhyrappa To Be Held In Mysuru On Sept 26

SL Bhyrappa: ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ (SL Bhyrappa) ಇಂದು ಬೆಳಗ್ಗೆ … ಗಂಟೆಗೆ ಮೈಸೂರಿನ (Mysuru) ಚಾಮುಂಡಿ ಬೆಟ್ಟದ (Chamundi hill) ತಪ್ಪಲಿನ ರುದ್ರ ಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. 

ಮೈಸೂರು: ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ (SL Bhyrappa) ಇಂದು ಬೆಳಗ್ಗೆ  12″30ಕ್ಕೆ ಮೈಸೂರಿನ (Mysuru) ಚಾಮುಂಡಿ ಬೆಟ್ಟದ (Chamundi hill) ತಪ್ಪಲಿನ ರುದ್ರ ಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಅಂತಿಮ ವಿಧಿ ವಿಧಾನ ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ನೆರವೇರಿಸಿದ್ದು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಇಂದು ಬೆಳಗ್ಗೆ ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಿತು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಗುರುವಾರ ಮೈಸೂರಿಗೆ ತರಲಾಗಿದ್ದು, ನಗರದ ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಭೈರಪ್ಪ ಅವರ ಪಾರ್ಥೀವ ಶರೀರಕ್ಕೆ ಕೇಂದ್ರ ಸರ್ಕಾರದ ಪರವಾಗಿ ಜೋಷಿಯವರು ಅಂತಿಮ ನಮನ, ಗೌರವಾರ್ಪಣೆ ಸಲ್ಲಿಸಲಿದ್ದಾರೆ. 

Source link

Leave a Reply

Your email address will not be published. Required fields are marked *