
South Africa Beats 4-Time Champions England to Reach First Women’s World Cup Final ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ, ದಕ್ಷಿಣ ಆಫ್ರಿಕಾ ತಂಡವು 4 ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 125 ರನ್‌ಗಳಿಂದ ಸೋಲಿಸಿ ಇದೇ ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ.
ಗುವಾಹಟಿ (ಅ.29): 4 ಬಾರಿಯ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಅಧಿಕಾರಯುತವಾಗಿ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದು ದಕ್ಷಿಣ ಆಫ್ರಿಕಾ ತಂಡಕ್ಕೆ ಸತತ ಮೂರನೇ ಐಸಿಸಿ ಫೈನಲ್ ಆಗಿದೆ. ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 125 ರನ್‌ಗಳಿಂದ ನಾಲ್ಕು ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ 7 ವಿಕೆಟ್‌ಗೆ 319 ರನ್ ಬಾರಿಸಿದರೆ, ಪ್ರತಿಯಾಗಿ ಇಂಗ್ಲೆಂಡ್ ತಂಡ 42.3 ಓವರ್‌ಗಳಲ್ಲಿ 194 ರನ್‌ಗೆ ಆಲೌಟ್ ಆಯಿತು. 2ನೇ ಸೆಮಿಫೈನಲ್ ಪಂದ್ಯದಲ್ಲಿ ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.