ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ | Dk Shivakumar Election Campaign Minority Leaders Davanagere Gvd

ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ | Dk Shivakumar Election Campaign Minority Leaders Davanagere Gvd



ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ | Dk Shivakumar Election Campaign Minority Leaders Davanagere Gvd

ಚುನಾವಣೆ ಪ್ರಚಾರದ ಜವಾಬ್ದಾರಿಯನ್ನು ಸಚಿವ ಜಮೀರ್ ಅಹಮ್ಮದ್‌ ಅವರಿಗೆ ಪಕ್ಷವು ನೀಡಿದ್ದು, ಅದನ್ನು ಅವರು ಮುಗಿಸಿಕೊಳ್ಳುತ್ತಾರೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದಾವಣಗೆರೆ (ಏ.01): ಚುನಾವಣೆ ಪ್ರಚಾರದ ಜವಾಬ್ದಾರಿಯನ್ನು ಸಚಿವ ಜಮೀರ್ ಅಹಮ್ಮದ್‌ ಅವರಿಗೆ ಪಕ್ಷವು ನೀಡಿದ್ದು, ಅದನ್ನು ಅವರು ಮುಗಿಸಿಕೊಳ್ಳುತ್ತಾರೆ. ಇನ್ನುಳಿದ ಅಲ್ಪಸಂಖ್ಯಾತ ನಾಯಕರಿಗೂ ನಾವು ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದ್ದೇವೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ವ್ಯಕ್ತಿಯ ಮೇಲೆ ಪಕ್ಷ ನಡೆಯುವುದಿಲ್ಲ. ಡಿ.ಕೆ.ಶಿವಕುಮಾರ್ ಮೇಲೂ ನಡೆಯುವುದಿಲ್ಲ.

ಸಿದ್ದರಾಮಯ್ಯ ಮೇಲೂ ನಡೆಯುವುದಿಲ್ಲ. ಜಮೀರ್ ಮೇಲೂ ನಡೆಯುವುದಿಲ್ಲ ಎಂದರು. ಪಕ್ಷವು ಸಿದ್ಧಾಂತ ಹಾಗೂ ಕಾರ್ಯಕರ್ತರ ಮೇಲೆ ನಡೆಯುತ್ತದೆ. ಚುನಾವಣೆಯಲ್ಲಿ ನಾವು ಮೊದಲಿನಿಂದಲೂ ಕೆಲಸ ಮಾಡಿಕೊಂಡು ಬಂದಿದ್ದೇವೆ. ಅಲ್ಪಸಂಖ್ಯಾತರಿಗೆ ನಾವು ಕೊಟ್ಟಿರುವ ಕೊಡುಗೆಯನ್ನು ಬಿಜೆಪಿಯವರು ಮುಸ್ಲಿಮರ ಓಲೈಕೆಯೆಂದು ಟೀಕಿಸುತ್ತಿದೆ. ಇದು ಮುಸ್ಲಿಮರ ಪಕ್ಷವೆಂದು ಟೀಕಿಸುತ್ತಾರೆ. ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ರಕ್ಷಣೆ ಮಾಡಿಕೊಂಡು, ಅಧಿಕಾರವನ್ನೂ ನೀಡುತ್ತಾ ಬಂದಿದ್ದೇವೆ. ಈ ದೃಷ್ಟಿಯಿಂದಲೇ ನಾವು ಇದೇ ಭಾಗದ ಅಬ್ದುಲ್‌ ಜಬ್ಬಾರ್‌ ಅವರಿಗೆ ವಿಧಾನ ಪರಿಷತ್ತು ಸದಸ್ಯ ಸ್ಥಾನ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದವರಿಗೂ ಸ್ಥಾನ ನೀಡಲಾಗಿದೆ. 16 ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಲಾಗಿದೆ ಎಂದು ಡಿಕೆಶಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಾದಿಕ್ ಪೈಲ್ವಾನ್ ನಿವಾಸಕ್ಕೆ ಡಿಕೆಶಿ ಭೇಟಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದು, ರಣರಂಗದ ಮೈದಾನಕ್ಕೆ ಇಳಿದಿದ್ದೇನೆ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಬಂಡಾಯ ಸಾರಿದ್ದ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ಡಿ.ಕೆ.ಶಿವಕುಮಾರ ಜೊತೆಗೆ ಹ್ಯಾರಿಸ್, ಸಲೀಂ ಅಹಮ್ಮದ್, ಮಹಮ್ಮದ್ ನಲಪಾಡ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಇದೇ ವೇಳೆ ಡಿಕೆಶಿ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಸಾದಿಕ್ ಪೈಲ್ವಾನರ ನಿವಾಸದಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ನಂತರ ಸಾದಿಕ್ ಪೈಲ್ವಾನರ ಜೊತೆಗೆ ಚರ್ಚಿಸಿದ ಡಿ.ಕೆ.ಶಿವಕುಮಾರ, ಕ್ಷೇತ್ರಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕೈಗೊಳ್ಳುವಂತೆ, ಭಾರೀ ಮತಗಳ ಅಂತರದಿಂದ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ಸನ್ನು ಗೆಲ್ಲಿಸಲು ಎಲ್ಲರೂ ಸೇರಿ, ಕೆಲಸ ಮಾಡೋಣ ಎಂದು ಕರೆ ನೀಡಿದರು. ಸಾದಿಕ್ ಪೈಲ್ವಾನ ಕುಟುಂಬ ಸದಸ್ಯರು, ಮುಸ್ಲಿಂ ಮುಖಂಡರು, ಸಮಾಜ ಬಾಂಧವರು ಇದ್ದರು.



Source link

Leave a Reply

Your email address will not be published. Required fields are marked *