ಡಿಫೆನ್ಸ್‌ ಏರೋಸ್ಪೇಸ್‌ನಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಸಚಿವ ಎಂ.ಬಿ.ಪಾಟೀಲ್‌ | Karnataka No 1 Defense Aerospace Says Mb Patil Gvd

ಡಿಫೆನ್ಸ್‌ ಏರೋಸ್ಪೇಸ್‌ನಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಸಚಿವ ಎಂ.ಬಿ.ಪಾಟೀಲ್‌ | Karnataka No 1 Defense Aerospace Says Mb Patil Gvd



ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು (ಜು.17): ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವು ಅಲ್ಲಿಗೆ ಹೋಗುವುದಿಲ್ಲ. ಕಾರ್ಯ ಪರಿಸರ ಕೂಡ ಮಹತ್ತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ ಬಿ ಪಾಟೀಲನಿಗೂ ಸಾಮರ್ಥ್ಯವಿದೆ, ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದು ಅವರು ವಿಶ್ವಾಸ ಪ್ರಕಟಿಸಿದ್ದಾರೆ.

ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ‌ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರು. ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.



Source link

Leave a Reply

Your email address will not be published. Required fields are marked *