Headlines

Karnataka cyber crime bust ಸೈಬರ್‌ ವಂಚನೆಗೆ ನಕಲಿ ಬ್ಯಾಂಕ್‌ಖಾತೆ ಪೂರೈಸುತ್ತಿದ್ದ 13 ಜನ ಸೆರೆ | Bengaluru 13 People Arrested For Using Fake Bank Accounts For Cyber Fraud

Karnataka cyber crime bust ಸೈಬರ್‌ ವಂಚನೆಗೆ ನಕಲಿ ಬ್ಯಾಂಕ್‌ಖಾತೆ ಪೂರೈಸುತ್ತಿದ್ದ 13 ಜನ ಸೆರೆ | Bengaluru 13 People Arrested For Using Fake Bank Accounts For Cyber Fraud



Karnataka cyber crime bust ಸೈಬರ್‌ ವಂಚನೆಗೆ ನಕಲಿ ಬ್ಯಾಂಕ್‌ಖಾತೆ ಪೂರೈಸುತ್ತಿದ್ದ 13 ಜನ ಸೆರೆ | Bengaluru 13 People Arrested For Using Fake Bank Accounts For Cyber Fraud

ರಾಜ್ಯದಲ್ಲಿ ಮೊದಲ ಬಾರಿಗೆ ನಡೆದ ಬೃಹತ್ ಸೈಬರ್ ಕಾರ್ಯಾಚರಣೆಯಲ್ಲಿ, ಸೈಬರ್ ವಂಚಕರಿಗೆ ಹಣ ವರ್ಗಾವಣೆ ಮಾಡಲು ನಕಲಿ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ 13 ಮಂದಿಯನ್ನು ಸೈಬರ್ ಕ್ರೈಂ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದರು.

ಬೆಂಗಳೂರು (ಫೆ.7): ಇದೇ ಮೊದಲ ಬಾರಿ ಸೈಬರ್ ವಂಚನೆ ಜಾಲದ ವಿರುದ್ಧ ರಾಜ್ಯಮಟ್ಟದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಸೈಬರ್ ಕ್ರೈಂ ಅಧಿಕಾರಿಗಳು ಹಣ ವರ್ಗಾವಣೆಗೆ ನಕಲಿ ಬ್ಯಾಂಕ್ ಖಾತೆಗಳನ್ನು ಪೂರೈಸಿದ್ದ 13 ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಸೇರಿ 10-14 ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಠಾಣೆಗಳ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಈ ಸಂಬಂಧ 17 ಎಫ್‌ಐಆರ್‌ಗಳು ದಾಖಲಾಗಿವೆ. ಎರಡು ದಿನಗಳಿಂದ ನಿರಂತರ ಕಾರ್ಯಾಚರಣೆ ವೇಳೆ 13 ಮಂದಿ ಬಲೆಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಹಾಗೂ ನಿಯಂತ್ರಣಕ್ಕೆ ಸರ್ಕಾರ ಪ್ರತ್ಯೇಕವಾಗಿ ಸೈಬರ್ ಕಮಾಂಡ್ ಸೆಂಟರ್ ರಚಿಸಿತ್ತು. ಈಗ ಸೈಬರ್ ವಂಚಕರ ವಿರುದ್ಧ ಕಮಾಂಡ್ ಸೆಂಟರ್ ಫೀಲ್ಡ್‌ಗಿಳಿದಿದೆ. ಸೈಬರ್‌ ಅಪರಾಧ ಕೃತ್ಯಗಳಲ್ಲಿ ಹಣ ವರ್ಗಾವಣೆಗೆ ಅಕ್ರಮವಾಗಿ ಬ್ಯಾಂಕ್ ಖಾತೆ ಪೂರೈಸುತ್ತಿದ್ದ ದಂಧೆಕೋರರ ಪತ್ತೆಗೆ ಸಿಐಡಿ ಸೈಬರ್ ಎಸ್ಪಿ ಉಸ್ತುವಾರಿಯಲ್ಲಿ ಸೈಬರ್ ಕ್ರೈಂ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಎಟಿಎಂ ಹಣ ಲೆಕ್ಕ:

ಕೆಲ ತಿಂಗಳಿಂದ ಎಟಿಎಂ ಘಟಕಗಳಲ್ಲಿ ಹಣ ಪಡೆಯುವ ಗ್ರಾಹಕರ ಮೇಲೆ ಸೈಬರ್ ಕ್ರೈಂ ಅಧಿಕಾರಿಗಳು ಕಣ್ಣಿಟ್ಟಿದ್ದರು. ಖಾತೆಗೆ ಹಣ ಜಮೆಯಾದ ಕೂಡಲೇ ಹಣ ಡ್ರಾ ಮಾಡುವವರ ಪಟ್ಟಿಯನ್ನು ಅಧಿಕಾರಿಗಳು ತಯಾರಿಸಿದ್ದರು. ಬಳಿಕ ಈ ಪಟ್ಟಿಯಲ್ಲಿದ್ದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದಾಗ ಸೈಬರ್ ಅಪರಾಧ ಕೃತ್ಯಗಳಲ್ಲಿ ಹಣ ವರ್ಗಾವಣೆಗೆ ಬಳಕೆಯಾಗಿರುವುದು ಖಚಿತವಾಗಿದೆ. ಈ ಮಾಹಿತಿ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನಕಲಿ ಖಾತೆದಾರರ ಸೆರೆಗೆ ಸೈಬರ್ ಅಧಿಕಾರಿಗಳು ಯೋಜಿಸಿದ್ದರು. ಅದರಂತೆ ಗುರುವಾರ ಏಕಕಾಲಕ್ಕೆ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಬ್ಯಾಂಕ್ ಖಾತೆಗಳಲ್ಲಿ ಹಣ ಜಪ್ತಿ:

ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರುಪಾಯಿಯನ್ನು ಸೈಬರ್ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಹಣದ ಮೂಲ ಶೋಧಿಸಿ ಸಂತ್ರಸ್ತರಿಗೆ ಅದನ್ನು ಮರಳಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ದಾಳಿ ತಡವಾಗಿದ್ದರೆ ಹಣ ನಗದೀಕರಣವಾಗಿ ಸೈಬರ್ ವಂಚಕರ ಪಾಲಾಗುತ್ತಿತ್ತು ಎಂದು ಮೂಲಗಳು ಹೇಳಿವೆ.



Source link

Leave a Reply

Your email address will not be published. Required fields are marked *