
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಇಂಧನ ದರ ಏರಿಕೆಯ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಪ್ರತಿ ಲೀಟರ್ಗೆ ತಲಾ 10 ರೂಪಾಯಿ ಇಳಿಕೆ ಮಾಡಿದೆ.
ನವದೆಹಲಿ: ಇರಾನ್ ಇಸ್ರೇಲ್ ಯುದ್ಧದಿಂದಾಗಿ ಇಂಧನ ದರ ಏರಿಕೆ ಭೀತಿಯ ನಿರೀಕ್ಷೆಯಲ್ಲಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಕಡಿತಗೊಳಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ತಲಾ 10 ರೂಪಾಯಿ ಇಳಿಕೆ ಮಾಡಿರುವುದಾಗಿ ಸರ್ಕಾರ ಘೋಷಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲೂ ತಲಾ 10 ರೂ. ಕಡಿತವಾಗಿದ್ದು, ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಹಣದುಬ್ಬರ ನಿಯಂತ್ರಣ ಮತ್ತು ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಸರ್ಕಾರದ ಈ ನಿರ್ಧಾರದ ಹಿಂದಿನ ಪ್ರಮುಖ ಉದ್ದೇಶವಾಗಿದೆ.