Mangalore Dasara ವೈಭವಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ: ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿ | Dcm Dk Shivakumar Visit Kudroli Gokarnanatha Temple Gvd

Mangalore Dasara ವೈಭವಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ: ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿ | Dcm Dk Shivakumar Visit Kudroli Gokarnanatha Temple Gvd



Mangalore Dasara ವೈಭವಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಮೆಚ್ಚುಗೆ: ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿ | Dcm Dk Shivakumar Visit Kudroli Gokarnanatha Temple Gvd

ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಶಾರದೆಯ ಸನ್ನಿಧಿಯಲ್ಲಿ ಡಿಕೆಶಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.

ಮಂಗಳೂರು (ಅ.03): ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿ, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ. ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು. ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್‌, ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಮುಖಂಡರಾದ ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

2 ವರ್ಷಗಳ ಅಧಿಕಾರ ಹಂಚಿಕೆ ನಿಗಮ, ಮಂಡಳಿಗಷ್ಟೆ

‘ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ, ಸರ್ಕಾರಕ್ಕಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ‘ಹಾಲಿ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವವರನ್ನು ಎರಡು ವರ್ಷಗಳ ನಂತರ ಬದಲಾವಣೆ ಮಾಡಿ ಬೇರೆಯವರಿಗೆ ಅಧಿಕಾರ ಹಂಚಿಕೆ ಮಾಡಲಾಗುವುದು. ಈ ಅಧಿಕಾರ ಹಂಚಿಕೆ ಸರ್ಕಾರದ ಮಟ್ಟಕ್ಕಲ್ಲ’ ಎಂದರು, ‘ನಮ್ಮ ಈ ಅಧಿಕಾರ ಹಂಚಿಕೆ ಕೇವಲ ನಿಗಮ ಮಂಡಳಿ ವಿಚಾರದಲ್ಲಿ ಮಾತ್ರ. ಸರ್ಕಾರದ ಮಟ್ಟದಲ್ಲಿ ಅಲ್ಲ ಎಂದು ಸ್ಪಷ್ಟನೆ ನೀಡಲು ಬಯಸುತ್ತೇನೆ. ಇಲ್ಲವಾದರೆ ನಾನು ಹಂಚಿಕೆ ವಿಚಾರ ಮಾತನಾಡಿದೆ ಎಂದು ಸರ್ಕಾರದ ವಿಚಾರಕ್ಕೆ ಲಿಂಕ್ ಮಾಡಿ ಅನಗತ್ಯ ಚರ್ಚೆ ಆಗಬಹುದು. ಆ ರೀತಿ ಮಾಡುವುದು ಬೇಡ. ನಾನು ಹಾಗೂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತಿಗೆ ಬದ್ಧವಾಗಿ ನಡೆಯುತ್ತೇವೆ. ಈ ವಿಚಾರದಲ್ಲಿ ಅನಗತ್ಯ ಚರ್ಚೆ ಬೇಡ’ ಎಂದು ತಿಳಿಸಿದರು.

‘ಪಕ್ಷದ ಮುಖಂಡರು, ಕಾರ್ಯಕರ್ತರ ಪರಿಶ್ರಮವನ್ನು ಪಕ್ಷ ಗುರುತಿಸುತ್ತದೆ. ಪಕ್ಷಕ್ಕೆ ದುಡಿದವರಿಗೆ ನಾವು ನಿಗಮ-ಮಂಡಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನೇಮಿಸಿದ್ದೇವೆ. ಸದ್ಯದಲ್ಲೇ 650 ನಿರ್ದೇಶಕರ ಪಟ್ಟಿಯನ್ನೂ ಅಂತಿಮಗೊಳಿಸಿ ಎರಡು-ಮೂರು ದಿನಗಳಲ್ಲಿ ಪ್ರಕಟಿಸುತ್ತೇವೆ. ಈಗ ನೇಮಕಗೊಂಡಿರುವವರರಲ್ಲಿ ಎರಡು ವರ್ಷಗಳ ನಂತರ ಕೆಲ ಅಧ್ಯಕ್ಷರು ರಾಜೀನಾಮೆ ನೀಡಲಿದ್ದು, ಬೇರೆಯವರಿಗೆ ಅಧಿಕಾರ ನೀಡಲಾಗುವುದು. ನಾವು ಎಲ್ಲರಿಗೂ ಅಧಿಕಾರ ಹಂಚಿ ಪ್ರೋತ್ಸಾಹ ನೀಡುತ್ತೇವೆ’ ಎಂದರು. ‘ಮುಂದಿನ ದಸರಾದಿಂದ ಪಕ್ಷಕ್ಕೆ ದುಡಿದ ಸುಮಾರು ಸಾವಿರ ಜನ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಿಂದಲೇ ಆಹ್ವಾನ ನೀಡುವಂತೆ ಮಾಡಲಾಗುವುದು. ಎಲ್ಲಾ ಭಾಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಈ ವೈಭವಯುತ ನಾಡಹಬ್ಬವನ್ನು ಜನರು ನೋಡಿ ಕಣ್ತುಂಬಿಕೊಳ್ಳಲಿ’ ಎಂದು ತಿಳಿಸಿದರು.



Source link

Leave a Reply

Your email address will not be published. Required fields are marked *