Farooq Abdullah assassination attempt ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಜಮ್ಮುವಿನಲ್ಲಿ ಹತ್ಯೆ ಯತ್ನ | Assassination Attempt On Farooq Abdullah In Jammu Attacker Arrested Nc Chief Safe

Farooq Abdullah assassination attempt ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಜಮ್ಮುವಿನಲ್ಲಿ ಹತ್ಯೆ ಯತ್ನ | Assassination Attempt On Farooq Abdullah In Jammu Attacker Arrested Nc Chief Safe



Farooq Abdullah assassination attempt ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಜಮ್ಮುವಿನಲ್ಲಿ ಹತ್ಯೆ ಯತ್ನ | Assassination Attempt On Farooq Abdullah In Jammu Attacker Arrested Nc Chief Safe

Farooq Abdullah assassination attempt ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಭದ್ರತಾ ಸಿಬ್ಬಂದಿ ದಾಳಿಕೋರನನ್ನು ಬಂಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡು ಹಾರಿಸಲಾಗಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬುಧವಾರ (ಮಾರ್ಚ್ 11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಅಬ್ದುಲ್ಲಾ ಭಾಗವಹಿಸಿದ್ದರು. ಗುಂಡಿನ ದಾಳಿ ನಡೆಸಿದ ಕಮಲ್ ಸಿಂಗ್ ಜಮ್ವಾಲ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದೇನು?

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, ‘ದೇವರು ಕರುಣಾಮಯಿ. ನನ್ನ ತಂದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪ್ರಸ್ತುತ ದಾಳಿ ಮಾಡಿದ್ದೇಕೆ, ಯಾರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಲೋಡ್ ಮಾಡಿದ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೊಬ್ಬರು ನನ್ನ ತಂದೆಯ ಹತ್ತಿರ ಬಂದು ಗುಂಡು ಹಾರಿಸಿದ್ದಾರೆ ಎಂಬುದು ತಿಳಿದುಬಂದಿದೆ. ಭದ್ರತಾ ತಂಡವು ಗುಂಡನ್ನು ತಡೆದು ಹತ್ಯೆಯ ಪ್ರಯತ್ನವನ್ನು ವಿಫಲಗೊಳಿಸಿದೆ. ಪ್ರಸ್ತುತ, ಉತ್ತರಗಳಿಗಿಂತ ಹೆಚ್ಚಿನ ಪ್ರಶ್ನೆಗಳಿವೆ, ಅದರಲ್ಲಿ ಒಂದು Z+ (NSG) ಭದ್ರತಾ ಪಡೆಗಳಿಂದ ರಕ್ಷಣೆಯಲ್ಲಿರುವ ಮಾಜಿ ಮುಖ್ಯಮಂತ್ರಿಗೆ ಅಪರಿಚಿತರೊಬ್ಬರು ಇಷ್ಟು ಹತ್ತಿರಕ್ಕೆ ಬರಲು ಹೇಗೆ ಸಾಧ್ಯವಾಯಿತು? ಎಂಬುದು

ಘಟನೆಯ ವಿಡಿಯೋ ಬಹಿರಂಗ

ಗುಂಡಿನ ದಾಳಿ ಘಟನೆ ವ್ಯಾಪಕ ಕೋಲಾಹಲಕ್ಕೆ ಕಾರಣವಾಯಿತು. ಆರೋಪಿ ಕಮಲ್ ಸಿಂಗ್ ಜಮ್ವಾಲ್ ಜಮ್ಮು ನಿವಾಸಿ. ಘಟನೆಯ ವಿಡಿಯೋ ಕೂಡ ಹೊರಬಿದ್ದಿದೆ. ವಿಡಿಯೋದಲ್ಲಿ, ಆರೋಪಿ ಕಮಲ್ ಸಿಂಗ್ ಫಾರೂಕ್ ಅಬ್ದುಲ್ಲಾ ಬಳಿಗೆ ಬಂದು ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅವನು ಗುಂಡು ಹಾರಿಸಿದ ತಕ್ಷಣ, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ತಡೆದು ವಶಕ್ಕೆ ಪಡೆದಿರುವುದು ಕಾಣಬಹುದು.

ಫಾರೂಕ್ ಅಬ್ದುಲ್ಲಾ ಜೊತೆಗಿದ್ದ ಉಪಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯ 

ಫಾರೂಕ್ ಅಬ್ದುಲ್ಲಾ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಚೌಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.



Source link

Leave a Reply

Your email address will not be published. Required fields are marked *