
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಇಂದು ಮತ್ತೆ ಇಡಿ ಬಿಗ್ ಶಾಕ್ ಕೊಟ್ಟಿದೆ. ಚಿತ್ರದುರ್ಗದ ಚಳ್ಳಕೆರೆಯ ಪಟ್ಟಣದಲ್ಲಿರುವ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ (ಸೆ.02): ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಇಂದು ಮತ್ತೆ ಇಡಿ ಬಿಗ್ ಶಾಕ್ ಕೊಟ್ಟಿದೆ. ಚಿತ್ರದುರ್ಗದ ಚಳ್ಳಕೆರೆಯ ಪಟ್ಟಣದಲ್ಲಿರುವ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಇಡಿ ವಶದಲ್ಲೇ ಇರುವ ಕಾಂಗ್ರೆಸ್ ಶಾಸಕನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಅವರ ಮನೆಯಲ್ಲಿ ಶೋಧ ನಡೆಸಿದ್ದು, ಕಾರುಗಳ ಜಪ್ತಿ ಸೇರಿ ಇತರೆ ಕ್ರಮಕ್ಕೆ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಆನ್ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಕೇಸ್ ಹಿನ್ನೆಲೆ ಈ ದಾಳಿ ನಡೆದಿದೆ.