ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ | Terrible Accident In Yamuna Expressway Near Mathura

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ | Terrible Accident In Yamuna Expressway Near Mathura



ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ | Terrible Accident In Yamuna Expressway Near Mathura

ಎಕ್ಸ್‌ಪ್ರೆಸ್ ವೇಯಲ್ಲಿ ದಟ್ಟ ಮಂಜಿನ ಕಾರಣ ಏಳು ಬಸ್‌ಗಳು ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ನಾಲ್ವರು ಸಜೀವ ದಹನವಾಗಿದ್ದು, 66ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ:

ದಟ್ಟ ಮಂಜಿನ ಕಾರಣಕ್ಕೆ ದಾರಿ ಕಾಣದೇ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮಥುರಾ ಸಮೀಪ ಯಮುನಾ ಎಕ್ಸ್‌ಪ್ರೆಸ್ ವೇಯಲ್ಲಿ ಈ ದುರಂತ ಸಂಭವಿಸಿದೆ. ಏಳು ಬಸ್‌ಗಳು ಹಾಗೂ ಮೂರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಈ ಬೆಂಕಿಯಲ್ಲಿ ನಾಲ್ವರು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಈ ದುರಂತದಲ್ಲಿ 66 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದಾಗಿ ವಾಹನಗಳು ನಜ್ಜುಗುಜ್ಜಾಗಿದ್ದು, ವಾಹನಗಳ ಮಧ್ಯೆ ದೇಹದ ಭಾಗಗಳು ಸಿಲುಕಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಅಲ್ಲಿದ್ದ ಯುವಕನೋರ್ವ ತಾನು 8 ರಿಂದ 9 ದೇಹಗಳನ್ನು ಬಸ್‌ನಿಂದ ಹೊರಗೆ ಎಳೆದಿದ್ದೇನೆ ಎಂದು ಹೇಳಿದ್ದು, ಅಪಘಾತದಲ್ಲಿ ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಪ್ರತ್ಯಕ್ಷದರ್ಶಿಯೊಬ್ಬರು 20 ಆಂಬುಲೆನ್ಸ್‌ನಲ್ಲಿ 150 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಅವರು ಈ ಬಗ್ಗೆ ಮಾತನಾಡಿದ್ದು, ಯಮುನಾ ಎಕ್ಸ್‌ಪ್ರೆಸ್ ವೇಯ ಮೈಲಿಗಲ್ಲು 127ರ ಬಳಿ ಬಲ್‌ದೇವ್ ಪೊಲೀಸ್ ಠಾಣೆ ಸಮೀಪ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮ ವಾಹನ, ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಹೆದ್ದಾರಿಯಿಂದ ವಾಹನಗಳ ಅವಶೇಷಗಳನ್ನು ತೆಗೆಯಲಾಗುತ್ತಿದೆ ಎಂದು ಹೇಳಿದ್ದಾರೆ.

ಹಠಾತ್ ಬ್ರೇಕ್ ಹಾಕಿದಾಗ ಸರಣಿ ಅಪಘಾತ

ಎಕ್ಸ್‌ಪ್ರೆಸ್‌ವೇಯಲ್ಲಿ ದಟ್ಟವಾದ ಮಂಜಿನಿಂದ ಮುಂದೆ ಹೋಗುವ ವಾಹನಗಳು ಕಾಣುತ್ತಿರಲಿಲ್ಲ. ಇದ್ದಕ್ಕಿದ್ದಂತೆ, ಒಂದು ಬಸ್‌ನ ವೇಗ ಕಡಿಮೆಯಾಯಿತು, ಇದರಿಂದಾಗಿ ಹಲವಾರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದವು. ಡಿಕ್ಕಿಯ ನಂತರ, ಬಾಂಬ್ ಸ್ಫೋಟಗೊಂಡಂತೆ ಭಾಸವಾಯಿತು ಎಂದು ಪ್ರತ್ಯಕ್ಷದರ್ಶಿ ಭಗವಾನ್ ದಾಸ್ ಹೇಳಿದ್ದಾರೆ. ಜನರು ಬಸ್ಸಿನ ಕಿಟಕಿಗಳನ್ನು ಒಡೆದು ತಪ್ಪಿಸಿಕೊಳ್ಳಲು ಹೊರಗೆ ಹಾರುತ್ತಿದ್ದರು ಎಂದು ಅವರು ಹೇಳಿದ್ದಾರೆ. ಘಟನೆಯಲ್ಲಿ ಎಷ್ಟು ಜನರಿಗೆ ಹಾನಿಯಾಗಿದೆ ಎಂದು ಎಣಿಸಲು ಸಾಧ್ಯವಿಲ್ಲ ಎಂದು ಆಂಬ್ಯುಲೆನ್ಸ್ ಕೆಲಸಗಾರ ಅಮಿತ್ ಕುಮಾರ್ ಹೇಳಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.



Source link

Leave a Reply

Your email address will not be published. Required fields are marked *