SC ST Atrocity Cases: ಮಂಡ್ಯ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕಡಿಮೆ: ಸಚಿವ ಎನ್.ಚಲುವರಾಯಸ್ವಾಮಿ | Mandya District Atrocity Free Minister N Chaluvarayaswamy Gvd

SC ST Atrocity Cases: ಮಂಡ್ಯ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕಡಿಮೆ: ಸಚಿವ ಎನ್.ಚಲುವರಾಯಸ್ವಾಮಿ | Mandya District Atrocity Free Minister N Chaluvarayaswamy Gvd



SC ST Atrocity Cases: ಮಂಡ್ಯ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕಡಿಮೆ: ಸಚಿವ ಎನ್.ಚಲುವರಾಯಸ್ವಾಮಿ | Mandya District Atrocity Free Minister N Chaluvarayaswamy Gvd

ಬಹುತೇಕ ರಾಜೀ- ಸಂಧಾನದಲ್ಲೇ ಪ್ರಕರಣಗಳು ಬಗೆಹರಿದಿರುವುದರಿಂದ ಮಂಡ್ಯ ಜಿಲ್ಲೆಯನ್ನು ದೌರ್ಜನ್ಯ ಮುಕ್ತಗೊಳಿಸಬಹುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ (ಮಾ.09): ರಾಜ್ಯದಲ್ಲೇ ದೌರ್ಜನ್ಯ ಪ್ರಕರಣಗಳು ಮಂಡ್ಯ ಜಿಲ್ಲೆಯಲ್ಲಿ ಕಡಿಮೆ ಇದೆ. ಈ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವ ಪ್ರಮಾಣವೂ ವಿರಳ. ಬಹುತೇಕ ರಾಜೀ- ಸಂಧಾನದಲ್ಲೇ ಪ್ರಕರಣಗಳು ಬಗೆಹರಿದಿರುವುದರಿಂದ ಮಂಡ್ಯ ಜಿಲ್ಲೆಯನ್ನು ದೌರ್ಜನ್ಯ ಮುಕ್ತಗೊಳಿಸಬಹುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ- ಪಂಗಡಗಳ ಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯನ್ನು ಅಸ್ಪಶ್ಯತೆಯಿಂದ ಮುಕ್ತಗೊಳಿಸಿ ಕಾನೂನು ದುರ್ಬಳಕೆಯಾಗದಂತೆ ಮತ್ತು ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕ್ರಮ ವಹಿಸಿಬೇಕು. ಎಲ್ಲರೂ ಸಾಮರಸ್ಯ ಮತ್ತು ಸಮಾನತೆಯಿಂದ ಬದುಕಬೇಕು. ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ಕಾಯ್ದೆ ಜಾರಿಯಲ್ಲಿರುವುದು ಕೇವಲ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕರ್ನಾಟಕ ಮಾತ್ರ. ಕರ್ನಾಟಕದಲ್ಲಿ ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ₹40 ರಿಂದ ₹50 ಕೋಟಿ ಹಣ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

10 ವರ್ಷದಲ್ಲಿ 850 ಪ್ರಕರಣ

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ವಾರ್ಷಿಕ 50 ರಿಂದ 60 ದೌರ್ಜನ್ಯ ಪ್ರಕರಣ ದಾಖಲಾಗುತ್ತಿದೆ. ಕಳೆದ 10 ವರ್ಷದಲ್ಲಿ 850 ಪ್ರಕರಣ ದಾಖಲಾಗಿದ್ದು ₹12 ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಇದುವರೆಗೂ 37 ಪ್ರಕರಣದಲ್ಲಿ ಅಂತಿಮ ತೀರ್ಪು ಪಡೆದಿದ್ದು, ಶೇ.5 ರಷ್ಟು ಪ್ರಮಾಣದಲ್ಲಿ ಶಿಕ್ಷೆಯಾಗಿದೆ. ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 33 ಪ್ರತ್ಯೇಕವಾಗಿ ಪೊಲೀಸ್ ಠಾಣೆಗಳನ್ನು ತೆರೆದಿದೆ. ಇದರಿಂದ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವು ಸಭೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಸಂವಿಧಾನ ಪೀಠಿಕೆ ಭೋಧನೆ ಮಾಡಿದರು. ವೇದಿಕೆಯಲ್ಲಿ ಮಂಡ್ಯ ಕ್ಷೇತ್ರದ ಶಾಸಕ ಎಂ.ರವಿಕುಮಾರ್, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸತ್ಯಕೀರ್ತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಕಲಬುರಗಿಯ ಕೋಡ್ಲಾ ಶ್ರೀ ಉರಿಲಿಂಗ ಪೆದ್ದೀಶ್ವರ ಮಹಾಸಂಸ್ಥಾನ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಆನಂದ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



Source link

Leave a Reply

Your email address will not be published. Required fields are marked *