Headlines

ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ – ವಿಶೇಷ ಕಾರ್ಯಾಚರಣೆಗೆ ಡಾ। ಪರಂ ಸೂಚನೆ | Statewide Hunt Launched To Trace Illegal Bangladeshi Migrants

ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ – ವಿಶೇಷ ಕಾರ್ಯಾಚರಣೆಗೆ ಡಾ। ಪರಂ ಸೂಚನೆ | Statewide Hunt Launched To Trace Illegal Bangladeshi Migrants



ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ – ವಿಶೇಷ ಕಾರ್ಯಾಚರಣೆಗೆ ಡಾ। ಪರಂ ಸೂಚನೆ | Statewide Hunt Launched To Trace Illegal Bangladeshi Migrants

ಬಾಂಗ್ಲಾದೇಶಿಯರು ಸೇರಿ ಅನಧಿಕೃತವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಪತ್ತೆಗೆ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಬೆಂಗಳೂರು : ಬಾಂಗ್ಲಾದೇಶಿಯರು ಸೇರಿ ಅನಧಿಕೃತವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಪತ್ತೆಗೆ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್‌, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರು ಸೇರಿ ವಿದೇಶಿಗರ ಬಗ್ಗೆ ಒಬ್ಬೊಬ್ಬರು ಒಂದೊಂದು ಸಂಖ್ಯೆ ಹೇಳುತ್ತಿದ್ದಾರೆ. ಹೀಗಾಗಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ಪೊಲೀಸರಿಗೆ ಸೂಚಿಸಲಾಗಿದೆ. ಅದಕ್ಕಾಗಿ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ, ಅವರನ್ನು ಪತ್ತೆ ಮಾಡುವಂತೆ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪತ್ತೆಯಾಗುವ ಅಕ್ರಮ ಬಾಂಗ್ಲಾದೇಶಿಯರು ಸೇರಿ ಎಲ್ಲ ವಿದೇಶಿಗರನ್ನು ಅವರ ದೇಶಕ್ಕೆ ವಾಪಸ್‌ ಕಳುಹಿಸುವ ಕೆಲಸ ಮಾಡಲಾಗುವುದು ಎಂದರು.

ಕೆಮಿಕಲ್‌ ಕಾರ್ಖಾನೆ ಪರಿಶೀಲನೆಗೆ ಸೂಚನೆ:

ರಾಜ್ಯದಲ್ಲಿ ಡ್ರಗ್ಸ್‌ ದಂಧೆ ಪತ್ತೆಗೆ ಎಲ್ಲ ಕೆಮಿಕಲ್‌ ಕಾರ್ಖಾನೆಗಳ ಪರಿಶೀಲನೆಗೆ ಸೂಚಿಸಲಾಗಿದೆ. ಸ್ಥಳೀಯ ಪೊಲೀಸರು ಕಾರ್ಖಾನೆಗಳಿಗೆ ಭೇಟಿ ಅಲ್ಲಿನ ಚಟುವಟಿಕೆಗಳನ್ನು ದಾಖಲಿಸಿಕೊಂಡು ವರದಿ ಸಿದ್ಧಪಡಿಸಬೇಕು. ಅದಾದ ನಂತರ ಅವುಗಳ ಮೇಲೆ ನಿರಂತರ ನಿಗಾವಹಿಸಬೇಕು. ಜತೆಗೆ ಕಾರ್ಖಾನೆಗಳ ಉದ್ದಿಮೆ ಪರವಾನಗಿ, ಏನು ಉತ್ಪಾದನೆ ಮಾಡಲಾಗುತ್ತಿದೆ ಎಂಬುದು ಮತ್ತಿತರ ಅಂಶಗಳನ್ನು ಗಮನಿಸಬೇಕು ಎಂದು ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಮೈಸೂರು ಡ್ರಗ್ಸ್ ಫ್ಯಾಕ್ಟ್ರಿ ಪತ್ತೆ ಬೆನ್ನಲ್ಲೇ ಕೆಮಿಕಲ್‌ ಕಾರ್ಖಾನೆ ಮೇಲೆ ನಿಗಾ

ಮಹಾರಾಷ್ಟ್ರ ಪೊಲೀಸರು ಹಾಗೂ ಎನ್‌ಸಿಬಿ ಅಧಿಕಾರಿಗಳು ಮೈಸೂರಿನಲ್ಲಿ ಡ್ರಗ್‌ ಫ್ಯಾಕ್ಟರಿಗಳನ್ನು ಪತ್ತೆ ಹಚ್ಚಿದ ಬೆನ್ನಲ್ಲೇ ರಾಜ್ಯದಲ್ಲಿ ಕಾರ್ಯಾಚರಣೆ ಮಾಡುತ್ತಿರುವ ರಾಸಾಯನಿಕ ಕಾರ್ಖಾನೆಗಳ ಪರಿಶೀಲನೆಗೆ ರಾಜ್ಯ ಸರ್ಕಾರ ಸೂಚಿಸಿದೆ. ಪೊಲೀಸರು ಕಾರ್ಖಾನೆಗಳಿಗೆ ಭೇಟಿ ಅಲ್ಲಿನ ಚಟುವಟಿಕೆಗಳನ್ನು ದಾಖಲಿಸಿಕೊಂಡು ವರದಿ ಸಿದ್ಧಪಡಿಸಬೇಕು. ಅದಾದ ನಂತರ ಅವುಗಳ ಮೇಲೆ ನಿರಂತರ ನಿಗಾವಹಿಸಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *