Headlines

ಬೈಕ್‌ಗೆ ಗುದ್ದಿದ ಬುಲೇರೋ ಗೂಡ್ಸ್ ವಾಹನ : ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು | Two Forest Watcher On Duty Killed After Bolero Goods Vehicle Collide Their Bike

Vijayanagara forest watchers death: ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಬೊಲೆರೋ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ರಾತ್ರಿ ಪಾಳಿಯಲ್ಲಿದ್ದ ಇಬ್ಬರು ಅರಣ್ಯ ಇಲಾಖೆ ವಾಚರ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೃಷ್ಣ ಮತ್ತು ಹನುಮಂತಪ್ಪ ಎಂದು ಗುರುತಿಸಲಾಗಿದೆ.

ಬೈಕ್‌ಗೆ ಗುದ್ದಿದ್ದ ಬೊಲೆರೋ: ಬೈಕ್ ಸವಾರರ ದಾರುಣ ಸಾವು

ವಿಜಯನಗರ‌: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕಮಲಾಪುರ ನಿವಾಸಿ 26ರ ಹರೆಯದ ಕೃಷ್ಣ ಹಾಗೂ ವೆಂಕಟಾಪುರದ 50 ವರ್ಷ ಪ್ರಾಯದ ಹನುಮಂತಪ್ಪ ಎಂದು ಗುರುತಿಸಲಾಗಿದೆ. ಇಬ್ಬರು ಅರಣ್ಯ ಇಲಾಖೆಯಲ್ಲಿ ವಾಚರ್‌ಗಳಾಗಿ ಕೆಲಸ ಮಾಡುತ್ತಿದ್ದರು.

ಮೃತರು ಅರಣ್ಯ ಇಲಾಖೆಯಲ್ಲಿ ವಾಚರ್‌ಗಳಾಗಿ ಕೆಲಸ ಮಾಡುತ್ತಿದ್ದರು:

ಇಬ್ಬರು ರಾತ್ರಿ ಪಾಳಿಯಲ್ಲಿ ಕೆಲಸ‌ ಮಾಡುತ್ತಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಇವರ ಬೈಕ್‌ಗೆ ಬುಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಇಬ್ಬರು ಹೊರಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ವಾಚರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಘಟನೆಯ ಬಳಿಕ ಬೊಲೆರೋ ವಾಹನ ಎಸ್ಕೇಪ್ ಆಗಿದ್ದು, ವಾಹನವನ್ನು ಹಿಡಿದು ಪೊಲೀಸರು ಪ್ರಕರ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಹಂಪಿ ಸಿಪಿಐ ರಾಜೇಶ್ ಭಟಗುರ್ಕಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿ: ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

Source link

Leave a Reply

Your email address will not be published. Required fields are marked *