ನವದೆಹಲಿ (ಆ.1): ಕೇಂದ್ರ ಸರ್ಕಾರ 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆ ಮಾಡಿದ್ದು, ‘ಕಂದೀಲು’ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ವಿಜೇತರ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಯನ್ನು ಯಶೋಧ ಪ್ರಕಾಶ್ ನಿರ್ದೇಶನದ ‘ಕಂದೀಲು – ದಿ ರೇ ಆಫ್ ಹೋಪ್’ ಪಡೆದುಕೊಂಡಿದೆ. ಸ್ವಸ್ತಿಕ್ ಎಂಟರ್‌ಟೇನ್‌ಮೆಂಟ್ ನಿರ್ಮಾಣದ ಸಿನಿಮಾ ಇದಾಗಿದೆ. ಅಶುತೋಷ್ ಗೋವಾರಿಕರ್, ಕನ್ನಡದ ನಿರ್ದೇಶಕ ಪಿ.ಶೇಷಾದ್ರಿ ಇದ್ದ ತೀರ್ಪುಗಾರರ ತಂಡ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ವಿಜೇತರನ್ನು ಆಯ್ಕೆ ಮಾಡಿದೆ.

ಬೆಸ್ಟ್ ಸ್ಕ್ರಿಪ್ಟ್ (ನಾನ್ ಫಿಚರ್ ಫಿಲ್ಮ್ಸ್) ವಿಭಾಗದಲ್ಲಿ ಮೈಸೂರಿನ ಚಿದಾನಂದ ನಾಯಕ್ ಅವರ ‘ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ’ ಪ್ರಶಸ್ತಿ ಬಾಚಿಕೊಂಡಿದೆ. ಚಿದಾನಂದ ಅವರ ‘ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ’ (Sunflowers Were The First Ones to Know) ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಲಾ ಸಿನೆಫ್ ಪ್ರಶಸ್ತಿ’ ಜಯಿಸಿತ್ತು. ಈಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ನಾನ್ ಫೀಚರ್ ಫಿಲ್ಮ್ ವಿಭಾಗದ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಜಯಿಸಿದೆ.

ಸುದ್ದಿ ಅಪ್‌ಡೇಟ್ ಆಗುತ್ತಿದೆ.

Source link
ಸ್ಯಾಂಡಲ್‌ವುಡ್‌ಗೆ ಮತ್ತೊಂದು ರಾಷ್ಟ್ರಪ್ರಶಸ್ತಿ, ಕಂದೀಲು ಸಿನಿಮಾಗೆ ಅವಾರ್ಡ್!