Headlines

ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ | Karnataka Governor Opposes Sslc Grading System Krv Raj Bhavan To Be Besieged Tomorrow Rav

ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ | Karnataka Governor Opposes Sslc Grading System Krv Raj Bhavan To Be Besieged Tomorrow Rav



ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ | Karnataka Governor Opposes Sslc Grading System Krv Raj Bhavan To Be Besieged Tomorrow Rav

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಇದನ್ನು ಹಿಂದಿ ಹೇರಿಕೆಯ ಯತ್ನ ಎಂದು ಖಂಡಿಸಿರುವ ಕರವೇ ‘ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ರಾಜಭವನ ಮುತ್ತಿಗೆ.

ಬೆಂಗಳೂರು (ಏ.5): ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ವಿರುದ್ಧ ಏ.6ರಂದು ಬೆಳಗ್ಗೆ 10ಕ್ಕೆ ‘ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ರಾಜಭವನ ಮುತ್ತಿಗೆ ಹಾಕಲು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಿರ್ಧರಿಸಿದೆ.

ಶನಿವಾರ ಈ ಕುರಿತು ಮಾಹಿತಿ ನೀಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಹಿಂದಿ ಸಾಮ್ರಾಜ್ಯಶಾಹಿಯ ಲಾಬಿ ಪರ ಮಾತನಾಡುತ್ತಿರುವ ರಾಜ್ಯಪಾಲರೇ ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ನಿಲುವು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ

– ಎಸ್ಸೆಸ್ಸೆಲ್ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ಪದ್ಧತಿ

– ಈ ನೀತಿ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

– ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ

– ನೀವು ಹಿಂದಿ ಸಾಮ್ರಾಜ್ಯಶಾಹಿ ಪರ ಮಾತನಾಡ್ತಿದ್ದೀರಿ

– ನೀವು ಬರೆದ ಪತ್ರ, ಒಕ್ಕೂಟ ವ್ಯವಸ್ಥೆ ಅಣಕಿಸುವಂತಿದೆ

– ತಿಂದ ಮನೆಗೆ ಕನ್ನಹಾಕಬೇಡಿ: ನಾರಾಯಣಗೌಡ ಕಿಡಿ

ಗ್ರೇಡಿಂಗ್‌ ವ್ಯವಸ್ಥೆಗೆ ಕಾರಣ ಇದೆ:

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ-ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದು ಕೇಳಿ ಅಚ್ಚರಿಯಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ಕನ್ನಡಿಗರಿಗೆ ತಿಳಿದಿರಲಿಲ್ಲ. ಇಂತಹ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನೀವು ಬರೆದ ಪತ್ರ, ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ. ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡ ಜನತೆಯನ್ನು ಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕನ್ನಡಿಗರು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.



Source link

Leave a Reply

Your email address will not be published. Required fields are marked *