
<p><strong>ಮಂಗಳೂರು : </strong>ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಮುಖ್ಯ ಮಂತ್ರಿ ಆಗಿರುತ್ತೇನೆ . ಹೈ ಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ, ಮುಖ್ಯ ಮಂತ್ರಿ ಆಗಿ ನೀವೇ ಮುಂದುವರಿಯುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು. ಎಸ್ ಐಟಿ ವರದಿ ಈ ತಿಂಗಳು ಸಿಗಲಿದೆಯೇ ಎಂಬ ಪ್ರಶ್ನೆಗೆ , ಗೃಹ ಸಚಿವರು ಅ ಬಗ್ಗೆ ಹೇಳಿಕೆ ನೀಡಿದ್ದಾರೆ. ನನಗೆ ತಿಳಿದಿಲ್ಲ ಎಂದರು. ಕರಾವಳಿಗೆ ಪದೇ ಪದೇ ಭೇಟಿ ನೀಡುವ ಬಗ್ಗೆ ಯಾವುದೇ ಟಾರ್ಗೆಟ್ ಇಟ್ಟುಕೊಂಡಿಲ್ಲ. ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿದ್ದಾರೆ ಬಂದಿದ್ದೇನೆ ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮೇಲೆ ಪ್ರಕರಣ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿ,ಯಾರೇ ದ್ವೇಷ ಭಾಷಣ ಮಾಡಿದರೂ ಕೇಸು ದಾಖಲಾಗುತ್ತೆ. ದ್ವೇಷ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ ಎಂದು ಹೇಳಿದರು.</p><p> </p>
Source link
Breaking: ಹೈಕಮಾಂಡ್ ಒಪ್ಪಿದ್ರೆ 5 ವರ್ಷವೂ ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ!