Headlines

ಯೋಗೇಶ್ ಗೌಡ ಹತ್ಯೆ ಕೇಸ್: ವಿನಯ್‌ ಕುಲಕರ್ಣಿಗೆ ಬೇಲ್‌- ಸುಪ್ರೀಂ ಕೋರ್ಟ್‌ನಿಂದ ಕೈ ಶಾಸಕಗೆ ಜಾಮೀನು ಮಂಜೂರು | Vinay Kulkarni Granted Bail In Yogesh Gowda Murder Case

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿ ಆಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಎರಡು ತಿಂಗಳಲ್ಲಿ ಪ್ರಕರಣದ ವಿಚಾರಣೆ ಮುಗಿಸುವಂತೆ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಧಾರವಾಡ/ ನವದೆಹಲಿ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿ ಆಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಎರಡು ತಿಂಗಳಲ್ಲಿ ಪ್ರಕರಣದ ವಿಚಾರಣೆ ಮುಗಿಸುವಂತೆ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಜೂ. 15, 2016ರಂದು ಧಾರವಾಡದಲ್ಲಿ ಯೋಗೇಶ್‌ಗೌಡ ಹತ್ಯೆ

ಜೂ. 15, 2016ರಂದು ಧಾರವಾಡದಲ್ಲಿ ಯೋಗೇಶ್‌ಗೌಡ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ವಿರುದ್ಧ ಆರೋಪ ಕೇಳಿಬಂದು ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಈ ನಡುವೆ ಸುಪ್ರೀಂ ಕೋರ್ಟ್‌ನಲ್ಲಿಯೇ ವಿನಯ್‌ ಜಾಮೀನು ಪಡೆದು ಹೊರ ಬಂದಿದ್ದರು. ಬಳಿಕ ಸಾಕ್ಷಿಗಳ ಮೇಲೆ ಒತ್ತಡ ಹಾಕಿದ ಆರೋಪ ಅವರ ವಿರುದ್ಧ ಕೇಳಿಬಂದಿತ್ತು.

ಸುಪ್ರೀಂ ಕೋರ್ಟ್‌ ರದ್ದು ಮಾಡಿತ್ತು

ಈ ಹಿನ್ನೆಲೆಯಲ್ಲಿ ವಿನಯಲ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿತ್ತು. ಹಾಗಾಗಿ ಅವರನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಮುಗಿದಿರುವುದರಿಂದ ತಮಗೆ ಜಾಮೀನು ನೀಡಬೇಕು ಎಂದು ವಿನಯ್‌ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದರು. ಆದರೆ ಜಾಮೀನು ಸಿಕ್ಕಿರಲಿಲ್ಲ. ಮತ್ತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿನಯ್‌ ಪರ ಘೋಷಣೆ ಹಾಕಿದರು.

Source link

Leave a Reply

Your email address will not be published. Required fields are marked *