ಮಂಗಳೂರು, (ನವೆಂಬರ್ 23) : 2023ರ ವಿಧಾನಸಭೆ ಚುನಾವಣೆ ವೇಳೆ ಪುತ್ತೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯೊಳಗಿನ ಎರಡು ಗುಂಪುಗಳ ನಡುವಿನ ಮುಸುಕಿನ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. ಹೌದು…ಅರುಣ್ ಪುತ್ತಿಲ ಅವರು ಬಿಜೆಪಿ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆ. ಹೀಗಾಗಿ ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗವಹಿಸಿದ್ದ ಅಟಲ್ ವಿರಾಸತ್ ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಸಹಿತ ಪುತ್ತಿಲ ಪರಿವಾರದ ಪ್ರಮುಖರು. ಈ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಕಾರಣ ಬಿಜೆಪಿ ನಾಯಕರು ಈ ಹಿಂದೆ ಅರುಣ್ ಪುತ್ತಿಲ ಅವರಿಗೆ ನೀಡಿದ್ದ ಮಾತು ಉಳಿಸಿಕೊಂಡಿಲ್ಲ.
ಹೌದು.. ಪುತ್ತಿಲರನ್ನು ಬಿಜೆಪಿಗೆ ಕರೆತರುವಾಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ಕೊಡುವಂತೆ. ಆದರೆ ಬಳಿಕ ಯಾವುದೇ ಸ್ಥಾನಮಾನಗಳನ್ನು ಕೊಡದಿರುವುದಕ್ಕೆ ಮತ್ತೆ ಬಂಡಾಯದ ಮುನ್ಸೂಚನೆ ನೀಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಕಳೆದ ಮೂರ್ನಾಲ್ಕು ದಿನದ ಹಿಂದೆ ಪುತ್ತೂರಿನಲ್ಲಿ ಅಟಲ್ ಜನ್ಮ ಶತಾಭ್ಧಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜಾಧ್ಯಕ್ಷ ವಿವೈ ವಿಜಯೇಂದ್ರ ಭಾಗವಹಿಸಿದ್ದರು. ಆದರೆ, ಅರುಣ್ ಕುಮಾರ್ ಪುತ್ತಿಲ ಗೈರಾಗಿದ್ರು. ಕಾರ್ಯಕ್ರಮದಲ್ಲಿ ಪುತ್ತೂರು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿಲ್ಲ.
ಇದನ್ನೂ ಓದಿ: ಅರುಣ್ ಕುಮಾರ್ ಪುತ್ತಿಲ: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದು ಅಂತಿಮ ನಿರ್ಧಾರ ಸಾಧ್ಯತೆ
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಹಿಂದುತ್ವದ ಭದ್ರಕೋಟೆ. ಬಿಜೆಪಿಗೆ ಇಲ್ಲಿಂದ ಬಂದ ಬಲಕ್ಕೆ ಲೆಕ್ಕವಿಲ್ಲ. ಅಟಲ್ ಬಿಹಾರಿ ವಾಜಪೇಯಿ ಬಹಳ ವರ್ಷಗಳ ಹಿಂದೆ ಭೇಟಿ ನೀಡಿದ್ದ ಕ್ಷೇತ್ರ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ಕೊಡಲಿಲ್ಲ. ಇದರಿಂದ ಅರಣ್ ಕುಮಾರ್ ಪುತ್ತಿಲ ಬಿಜೆಪಿ ಬಂಡಾಯವಾಗಿ ಕಾಂಗ್ರೆಸ್ ಸೇರಿದ್ದ ಬಿಜೆಪಿ ಮುಖಂಡ ಅಶೋಕ್ ರೈ ಗೆಲುವಿಗೆ ಕಾರಣವಾಗಿದೆ. ಇದರೊಂದಿಗೆ ಬಿಜೆಪಿ ಹಾಗೂ ಅರುಣ್ ಪುತ್ತಲ ನಡುವಿನ ಜಗಳ ಮೂರನೇಯವರಿಗೆ ಲಾಭವಾಗಿತ್ತು. ಈ ವಿಚಾರ ಎಲ್ಲರಿಗೂ ಅರಿವಿಗೆ ಬಂತು. ಇದು ಲೋಕಸಭಾ ಚುನಾವಣೆಯಲ್ಲೂ ಮುಂದುವರಿಯಬಾರದು ಎಂದು ಅರುಣ್ ಕುಮಾರ್ ಪುತ್ತಿಲರನ್ನು ಮತ್ತೆ ಬಿಜೆಪಿಗೆ ಕರೆ ತರಲಾಯಿತು, ಎಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿದೆ. ಎಲ್ಲಾ ಸರಿ ಹೋಯ್ತ ಅಂದುಕೊಂಡಾಗಲೇ ಮತ್ತೆ ಅರುಣ್ ಕುಮಾರ್ ಪುತ್ತಿಲ ಬಂಡಾಯ ಎದ್ದಿರೋ ಬಗ್ಗೆ ಸದ್ದಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಕೂಡ ಅರುಣ್ ಕುಮಾರ್ ಪುತ್ತಿಲ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಪುತ್ತಿಲ ಪರಿವಾರದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ಹರಿದಾಡುತ್ತಿವೆ. ಚುನಾವಣೆಗೆ ಇನ್ನು ಎರಡು ವರ್ಷ ಇರೋವಾಗಲೇ ಈ ರೀತಿ ಬೆಳವಣಿಗೆ ಶುರುವಾಗಿದ್ದು, ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದುನೋಡಬೇಕಿದೆ.