
ಭಾರತೀಯ ಸಿನಿಮಾ ರಂಗದ ದಿಗ್ಗಜಕಿ ಆಶಾ ಭೋಸ್ಲೆ ಹೃದಯಾಘಾತದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.