Headlines

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ


ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ ಶಾಸಕ ಸತೀಶ್ ಆಪ್ತ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗೋಪಾಲಕೃಷ್ಣಯ್ಯ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರಿಗೆ ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.

ಸದ್ಯ, ಗಂಭೀರವಾಗಿರುವ ಗೋಪಾಲಕೃಷ್ಣ ನಾಯ್ಕರನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಹಿಡಿದ, ಅವರ ಪತ್ತೆಗಾಗಿ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಆತಂಕ ಉಂಟುಮಾಡಿದೆ.

(ಮಾಹಿತಿ ಅಪ್‌ಡೇಟ್ ಆಗಲಿದೆ)

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *