ಭಾರತ vs ಆಸ್ಟ್ರೇಲಿಯಾ ಮೊದಲ ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಪರ್ತ್ ಸ್ಟೇಡಿಯಂನಲ್ಲಿ ಈ ಆಟದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ಈವರೆಗೆ 152 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ಕಳೆದ ಹಲವು ವರ್ಷಗಳಿಂದ ಆಸೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.
ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಿದ್ದ ವೇಳೆ ಜಯ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಈ ಸರಣಿಯ ಮೊದಲ ಪ್ರದರ್ಶನ ಕಣಕ್ಕಿಳಿಯುತ್ತಿರುವ ಉಭಯ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ (ಪಾದಾರ್ಪಣೆ), ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್ದೀಪ್ ಸಿಂಗ್.
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್ಶಾ, ಕೂಪರ್ ಕೊನೊಲಿ, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ನಾಥನ್ ಲೀಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಸಲ್ವುಡ್.




