20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರಚನೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಶಾಸಕರು ಈ ವಿಷಯವಾಗಿ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಯಾವುದೇ ನಿರ್ದಿಷ್ಟ ನಾಯಕತ್ವದ ಹೆಸರಿನಲ್ಲದೇ, ಮೂರು, ನಾಲ್ಕು, ಐದು ಬಾರಿ ಶಾಸಕರಾಗಿರುವ ಅನುಭವಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಶಾಸಕರ ದೆಹಲಿ ಪ್ರವಾಸದ ಬಗ್ಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷಗಳನ್ನು ಪೂರೈಸಿದ್ದು, ಮುಂದಿನ…