ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ
ದಾವಣಗೆರೆ, ಏಪ್ರಿಲ್ 13: ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಇದ್ದಾರೆ. ಮಾಜಿ ಶಾಸಕರಾದ ಹೆಚ್.ಎಸ್.ಶಿವಶಂಕರ, ಅರುಣಕಮಾರ್, ಹೂವಿನ ಹಡಗಲಿಯ ಹಾಲಪ್ಪ ಸೇರಿದಂತೆ ಪ್ರಮುಖರಿಂದ ಪ್ರತಿಭಟನೆ ನಡೆದಿದ್ದು,…