ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ:-ಗೃಹ ಸಚಿವ ಡಾ. ಜಿ. ಪರಮೇಶ್ವರ್
ತುಮಕೂರು- ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.ನಗರದಲ್ಲಿ ನವೀಕರಣಗೊಂಡಿರುವ ಜಿಲ್ಲಾ ಮತ್ಸಾಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ ಎಂದರು.ಸುರ್ಜೇವಾಲಾ…