ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?


ಬಾಗಲಕೋಟೆ ಉಪ ಚುನಾವಣೆಗೆ ಕೊನೆ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ, ಏಪ್ರಿಲ್ 08: ಕ್ಷೇತ್ರದ ಅಭ್ಯರ್ಥಿ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆ ಕಲ್ಪಿಸಿದ್ದಾರೆ. ಬಾಗಲಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾದ ಸಿಬ್ಬಂದಿಗಳು ಐವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳಲ್ಲಿ ತೆರಳಿದ್ದಾರೆ. ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,77 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ, 1564 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು 2,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *