
ಬಾಗಲಕೋಟೆ, ಮಾರ್ಚ್ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ ಎಲ್ಲರ ಚಿತ್ತವಿದೆ. ಅದರಲ್ಲೊಂದು ಹೆಚ್ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (ಬಾಗಲಕೋಟೆ ಉಪಚುನಾವಣೆ). ಕೇಂದ್ರ ಚುನಾವಣಾ ಆಯೋಗ ಇಂದು ಘೋಷಣೆ ಮಾಡುವಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರಗಳು ಪ್ರಾರಂಭವಾಗುತ್ತವೆ. ಅದರಲ್ಲೂ ನಿನ್ನೆ, ಸಿಎಂ ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ.
ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್.ವೈ.ಮೇಟಿ ನಿಧನದಿಂದ ಕ್ಷೇತ್ರ ತೇರುತ್ತಿದ್ದು, ಮೇಟಿಯವರ ಕನಸಿನ ಕೂಸು ಸರಕಾರಿ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಉಪಚುನಾವಣೆ ಸಮೀಪದಲ್ಲಿ ಮಾಡಿದ ಕಾರ್ಯದ ಹಿಂದೆ ಲಾಭದ ಉದ್ದೇಶ ಅಡಗಿದೆ ಎಂದು ಬಿಂಬಿಸಲಾಗುತ್ತಿದೆ. ಸೇರಿದಂತೆ, ಡಿಸಿಎಂ ಬಿಜೆಪಿಗೆ ಚೆಕ್ ಮೇಟ್ ಕೊಟ್ಟಿದ್ದಾರೆ.
ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಸಿಎಂ, ಡಿಸಿಎಂ ಭೇಟಿ
ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರ ಮನೆಗೆ ಸಿಎಂ, ಡಿಸಿಎಂ ಭೇಟಿ ನೀಡಿ ಚಹಾ ಕುಡಿದಿದ್ದಾರೆ. ಇದು ಉಪಚುನಾವಣೆ ಹೊತ್ತಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಕೇವಲ ಕುಶಲೋಪರಿ ಮಾತ್ರ ಎಂದು ಹೇಳಿರುವ ಮಲ್ಲಿಕಾರ್ಜುನ ಚರಂತಿಮಠ, ಚರ್ಚೆಯ ಗುಟ್ಟು ಬಿಟ್ಟುಕೊಟ್ಟಿಲ್ಲ.
ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ
ಇನ್ನೊಂದು ಕಡೆ ಕೇಂದ್ರ ಚುನಾವಣಾ ಆಯೋಗದಿಂದ ಬಾಗಲಕೋಟೆ ಉಪಚುನಾವಣೆಗೆ ಏಪ್ರಿಲ್ 9 ರಂದು ದಿನಾಂಕವಾಗಿದೆ. ಇದರಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತಷ್ಟು ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್ ನಲ್ಲಿ ಗರಿಗೆದರಿವೆ. ಎಚ್ವೈ ಮೇಟಿ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ, ಉಮೇಶ್ ಮೇಟಿ, ಮಾದೇವಿ ಮೇಟಿ, ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕುಟುಂಬವನ್ನು ಪ್ರಬಲವಾಗಿರುವ ಮಾಜಿ ಸಚಿವ ಅಜಯ್ ಕುಮಾರ್ ಸರನಾಯಕ್, ಗೋವಿಂದ ಬಳ್ಳಾರಿ, ರಕ್ಷಾ ಈಟಿ ಸೇರಿದಂತೆ ಅನೇಕ ಆಕಾಂಕ್ಷಿಗಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಲಕೋಟೆ ಉಪಚುನಾವಣೆಯ ತಂತ್ರದ ಮೊದಲ ಹೆಜ್ಜೆ ಎಂಬಂತೆ ನಿನ್ನೆ ಭರ್ಜರಿ ಸ್ಟ್ರೋಕ್ ನೀಡಿದರು. ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಭೇಟಿ. ಇದು ಉಪಚುನಾವಣೆ ಹೊತ್ತಿನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಮಲ್ಲಿಕಾರ್ಜುನ ಚರಂತಿಮಠ ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ 10 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿದ್ದರು. ನಂತರ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇತ್ತೀಚಿಗೆ ಮಲ್ಲಿಕಾರ್ಜುನ ಚರಂತಿಮಠ ವಾಪಸ್ ಬಿಜೆಪಿಗೆ ಬರುತ್ತಾರೆ ಎಂಬ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಸಿಎಂ, ಡಿಸಿಎಂ ಅವರ ಮನೆಗೆ ಹೋಗಿದ್ದು ಸಂಚಲನ ಸೃಷ್ಟಿಸಿದೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವ ರೀತಿ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಆದಷ್ಟು ಬೇಗ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಅವರೇ ಜವಾಬ್ದಾರಿಯಾಗಿ ನಿಂತುಕೊಂಡು ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸವನ್ನು ಮಾಡುತ್ತಾರೆ. ನಮ್ಮ ಸ್ನೇಹಿತರು ಬಹಳ ಒಳ್ಳೆಯವರು.
ಅವರು ನಮ್ಮ ಜೊತೆ ಇರ್ತಾರೆ.
ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ
ಸದ್ಯ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದರಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಭರ್ಜರಿ ತಂತ್ರ ಹೆಣೆಯುತ್ತಿದ್ದರೆ, ಯಾರ ತಂತ್ರ ಫಲ ನೀಡುತ್ತದೋ ಚುನಾವಣೆಗೆ ಉತ್ತರಿಸಬೇಕು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.