ವಿಜಯಪುರ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೂ ಕನ್ಹೇರಿ ಶ್ರೀಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್

ವಿಜಯಪುರ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೂ ಕನ್ಹೇರಿ ಶ್ರೀಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್


ಬಾಗಲಕೋಟೆ, (ಅಕ್ಟೋಬರ್ 17): ಮಹಾರಾಷ್ಟ್ರದಲ್ಲಿ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಕನ್ನೇರಿ ಅದೃಶ್ಯ ಕಾಡಿದ್ದೇಶ್ವರ ಶ್ರೀಗಳಿಗೆ (ಕನೇರಿ ಮಠದ ಶ್ರೀ) ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ ಶ್ರೀಗಳಿಗೆ ಇದೀಗ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ಪ್ರವೇಶ ಮಾಡದಂತೆ ಹಾಗೂ ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠಕ್ಕೆ ಬಾರದಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದೆ.

ಜಿಲ್ಲಾಧಿಕಾರಿ ಹೊರಡಿಸಿದ ನೋಟಿಸ್‌ಗಳನ್ನು ತಹಶೀಲ್ದಾರ ವಿನೋದ್ ಅವರು ಬೀಳಗಿ ತಾಲೂಕಿನ ಚಿಕ್ಕಲಗುಂಡಿ ಗ್ರಾಮದಲ್ಲಿರುವ ಮಠಕ್ಕೆ ತೆರಳಿ ಕನ್ಹೇರಿಯ ಕಾಡಸಿದ್ದ ಶ್ರೀಗಳಿಗೆ ನೀಡಿದ್ದು, ಮಠ ತೆರವು ಮಾಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ. ಕಾನೂನು ಸವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಇರಬಾರದು. ನಿಮ್ಮ ಮೂಲ ಜಾಗಕ್ಕೆ ತೆರಳಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ: ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ

ಬಸವನಬಾಗೇವಾಡಿಯಲ್ಲಿ ಅಕ್ಟೋಬರ್ 16 ಮತ್ತು 17ರಂದು ಸಮರ್ಥ ಸದ್ಗುರು ಶ್ರೀಸಿದ್ದರಾಮೇಶ್ವರ ಮಹಾರಾಜರ ಪುಣ್ಯತಿಥಿ ಆಯೋಜಿಸಲಾಗಿತ್ತು. ಅದರಲ್ಲಿ ಶ್ರೀಗಳು ದಿವ್ಯಸಾನಿಧ್ಯವಹಿಸಿದ್ದರು. ಹೀಗಾಗಿ ಕೊಲ್ಹಾಪುರದಿಂದ ಹೊರಟಿದ್ದ ಶ್ರೀಗಳು ವಿಜಯಪುರದ ಜಿಲ್ಲಾಧಿಕಾರಿಗಳ ಆದೇಶದಿಂದ ಚಿಕ್ಕಾಲಗುಂಡಿಯಲ್ಲೇ ಉಳಿದುಕೊಳ್ಳುತ್ತಾರೆ. ಕಳೆದ ಎರಡು ದಿನಗಳ ಕಾಲ ಮಠದ ಶ್ರೀಗಳನ್ನು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸೇರಿ ಹಲವು ಗಣ್ಯರು ಭೇಟಿ ಮಾಡಿ ಧೈರ್ಯ ಹೇಳಿದ್ದರು.

ಇದನ್ನೂ ಓದಿ: ಕನೇರಿ ಶ್ರೀಗಳಿಗೆ ವಿಜಯಪುರಕ್ಕೆ ನಿರ್ಬಂಧ: ಪ್ರತಿಷ್ಠಾನದ ಆದೇಶ ಎತ್ತಿ ಹಿಡಿದಿದೆ

ಮಹಾರಾಷ್ಟ್ರದಲ್ಲಿ ಬಸವ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿದ್ದ ಮಠ ಕನ್ಹೇರಿ ಮಠದ ಶ್ರೀಗಳು ಲಿಂಗಾಯತ ಮಠಾಧೀಶರ ವಿರುದ್ಧ ಮಾತನಾಡಿದ್ದ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ. ಅದಾದ ನಂತರ ಶ್ರೀಗಳು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ನೆಪವೊಡ್ಡಿ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಇನ್ನು ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಉಚ್ಛನ್ಯಾಯಾಲಯದ ಕಲಬುರಗಿಯ ಸಂಚಾರಿ ನ್ಯಾಯಪೀಠವು ಎತ್ತಿ ಹಿಡಿದಿತ್ತು. ನ್ಯಾಯಾಲಯದ ಆದೇಶದ ವಿವರಗಳನ್ನು ಒಳಗೊಂಡಿರುವ ಆದೇಶದ ಜೊತೆಗೆ ಬಾಗಲಕೋಟೆಯನ್ನು ತೊರೆಯುವಂತೆ ಜಿಲ್ಲಾಧಿಕಾರಿ ಎಂ.ಸಂಗಪ್ಪ ಅವರು ಸೂಚಿಸಿದ್ದಾರೆ.



Source link

Leave a Reply

Your email address will not be published. Required fields are marked *