ಬಾಗಲಕೋಟೆ, (ಜನವರಿ 15): ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (ರಬಕವಿ ಬನಹಟ್ಟಿ) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರದಂತೆ ಕಾಪಾಡುವ ನಾಟಕ ಆಡಿದ್ದರು. ನಂತರ ಶವವನ್ನು ತೆಗೆದು ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಸ್ಥಳೀಯರಿಗೆ ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬನಹಟ್ಟಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಇನ್ನು ಈ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಅವರು ಮತ್ತಷ್ಟು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.