ಬಾಗಲಕೋಟೆ, ಅಕ್ಟೋಬರ್ 19: ದೇಶಾದ್ಯಂತ ದೀಪಾವಳಿ (ದೀಪಾವಳಿ) ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಈ ವೇಳೆ ಇತ್ತ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್‌ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಅವಾಂತರ ಸಂಭವಿಸಿದೆ. ಪರಿಣಾಮ ಬೆಂಕಿಯ (ಬೆಂಕಿ) ಜಳ ತಗುಲಿ ಏಳು ಜನರಿಗೆ ಗಾಯ ಪ್ರಾಥಮಿಕ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಡೆದದ್ದೇನು?
ಉಮೇಶ್ ಮೇಟಿ ಎಂಬುವವರ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೇ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ ಕುಟುಂಬ ಸೇರಿ ಮತ್ತೊಂದು ಕುಟುಂಬ ಬಾಡಿಗೆಗೆ ಸೇರಿದೆ. ರಾಜೇಂದ್ರ ತಪಶೆಟ್ಟಿ ಕುಟುಂಬಸ್ಥರು ಮನೆ ಎದುರು ದೀಪ ಹಚ್ಚಿದ್ದರು. ಆ ದೀಪದ ಬೆಂಕಿ ಮನೆಯ ಎದುರಿಗೆ ಬಿದ್ದ ಐಲ್‌ಗೆ ತಗುಲಿ ಬೆಂಕಿ ಹೊತ್ತಿದೆ. ಮನೆ ಮುಂದಿನ ಎರಡು ಬೈಕ್ ಸುತ್ತು, ಮನೆಗೆ ಬೆಂಕಿ ಪ್ರವೇಶಿಸಿದೆ. ಅಡುಗೆ ಮನೆಯ ಸಿಲಿಂಡರ್ ಕೂಡ ಸೋರಿ ಮತ್ತಷ್ಟು ಬೆಂಕಿಯ ತೀವ್ರತೆ ಹೆಚ್ಚಾದೆ. ನೋಡನೋಡುತ್ತಿದ್ದಂತೆ ಮನೆ ಸುತ್ತು ಕರಕಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ನಿವೃತ್ತ ಯೋಧನಿಗೆ ಗಂಭೀರ ಗಾಯ, ಮನೆಯ ಮೇಲ್ಛಾವಣಿ, ಗೋಡೆ ಕುಸಿತ
ರಾಜೇಂದ್ರ ತಪಶೆಟ್ಟಿ ಬೋರ್ ವೆಲ್ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ ಮನೆ ಎದುರು ಬೋರ್ ವೆಲ್ ವಾಹನಗಳ ಆಯಿಲ್, ಗ್ರೀಸ್ ಬಿದ್ದಿತ್ತು. ದೀಪದ ಬೆಂಕಿ ಆಯಿಲ್, ಗ್ರೀಸ್‌ಗೆ ತಗುಲಿ ನಂತರ ಬೈಕ್ ಮತ್ತು ಮನೆಗೆ ವ್ಯಾಪಿಸಿದೆ. ಈ ವೇಳೆ ಹೊರಗೆ ಓಡಿ ಬಂದು ರಾಜೇಂದ್ರ ತಪಶೆಟ್ಟಿ ಕುಟುಂಬ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದೆ.
ಇದನ್ನೂ ಓದಿ: ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು
ಈ ವೇಳೆ ತಪಶೆಟ್ಟಿ ಕುಟುಂಬ ಮನೆಯಿಂದ ಹೊರಗೆ ಓಡಿಬಂದು ಬಚಾವ್ ಆಗಿದ್ದಾರೆ. ಆದರೆ ಅದೇ ಕಟ್ಟಡದ ಮೇಲ್ಮಹಡಿಯಲ್ಲಿ ವಾಸವಿದ್ದ ಮತ್ತೊಂದು ಕುಟುಂಬದ ಜನರ ಬೆಂಕಿಯ ಜಳ ತಗುಲಿ ಸಂಭವಿಸಿದೆ. ಮನೆಯ ವಸ್ತುಗಳು ಸುತ್ತು ಕರಕಲಾಗಿವೆ. ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ಶಮನ ಮಾಡಿದ್ದಾರೆ. ಕಲಾದಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.