Headlines

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ


ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆಯುವ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್ಐಎ ತನಿಖೆ ಅಗತ್ಯ ಎಂದು ಅವರು ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲಿ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಕ್ಕೆ ಶ್ರೀರಾಮುಲು ಒತ್ತಾಯಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಎಂಟು ಜನರನ್ನು ಬಂಧಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಇನ್ನು ಇದಕ್ಕೂ ಮುನ್ನ ಕೆಲ ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ದು, ವಿವಾದಕ್ಕೆ ಗುರಿಯಾಗಿದೆ. ’15 ನಿಮಿಷಂ ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್

ಕಲ್ಲು ತೂರಾಟ ಖಂಡಿಸಿ ಇಂದು ‘ಬೃಹತ್ ಪ್ರತಿಭಟನೆ’ – ನಗರದಾದ್ಯಂತ ಬಿಗಿ ಭದ್ರತೆ:

ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಪ್ರಕರಣ ಈಗ ಜಿಲ್ಲೆಯಲ್ಲಿ ಕಿಚ್ಚು ಹಚ್ಚಿದೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಬಾಗಲಕೋಟೆ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 3,000 ರಿಂದ 4,000 ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಪ್ರತಿಭಟನೆಯ ಮೂಲಕ ಪಂಕಾ ಅಧ್ಯಕ್ಷರು ಮತ್ತು ಸಮಿತಿಯ ಸದಸ್ಯರು ತಕ್ಷಣ ಬಂಧನ ಎಂಬ ಬೇಡಿಕೆಯನ್ನು ಇಡಬೇಕು. ಹಾಗೂ ಕಲ್ಲು ಮತ್ತು ಚಪ್ಪಲಿ ಎಸೆದ ಕಿಡಿಗೇಡಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು. ತಪ್ಪಿತಸ್ಥರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹ ಮಾಡಬೇಕೆಂದು ಹೇಳಲಾಗಿದೆ. ಇನ್ನು ಈ ಪ್ರತಿಭಟನೆ ಇಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *