ಬಾಗಲಕೋಟೆ, ನವೆಂಬರ್ 16: ರೈತರು ಕಬ್ಬಿಗೆ ಯೋಗ್ಯ ಬೆಲೆಗಾಗಿ ನಿರಂತರ ಹದಿನೈದು ದಿನ ಪ್ರತಿಭಟನೆ (ರೈತರ ಪ್ರತಿಭಟನೆ) ಹೇಳಿದರು. ಆದರೆ ನವೆಂಬರ್ 13 ರಂದು ಪ್ರತಿಭಟನಾನಿರತರು ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ ಇಡಲಾಗಿದೆ. ಅಷ್ಟೇ ಅಲ್ಲದೆ ಕಲ್ಲು ತೂರಾಟ ಕೂಡ ನಡೆದಿತ್ತು. ಸದ್ಯ ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ (ಎಫ್‌ಐಆರ್)ಸೇರಿವೆ.
ಮುಧೋಳ ಈ ವರ್ಷ ಕಬ್ಬಿಗೆ ಯೋಗ್ಯ ಬೆಲೆ ಹೋರಾಟದಿಂದ ರಾಜ್ಯದ ಗಮನ ಸೆಳೆದ ನಗರ. ನಿರಂತರ ಹದಿನೈದು ದಿನಗಳ ಕಾಲ ನಡೆದ ಹೋರಾಟ ನವೆಂಬರ್ 13 ರಂದು ವಿಕೋಪಕ್ಕೆ ತಿರುಗಿತ್ತು. ಮುಧೋಳದಿಂದ ಮಾಡಿದ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ರೈತರು ಸಂಜೆ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಈ ವೇಳೆ ನಡೆಯಬಾರದ ಘಟನೆ ನಡೆದು ಹೋಗಿತ್ತು. ಉದ್ರಿಕ್ತರು ಸಂಗನಟ್ಟಿ ಬಳಿ ಎರಡು ಟ್ರೇಲರ್ ನ ಟ್ರ್ಯಾಕ್ಟರ್ ತಳ್ಳಿ ಬೆಂಕಿ ಹಚ್ಚಿದ್ದರು. ನಂತರ ಗೋದಾವರಿ ಕಾರ್ಖಾನೆಯ 20ಕ್ಕೂ ಅಧಿಕ ಟ್ರಾಕ್ಟರಿಗೆ ಬೆಂಕಿ ಹಚ್ಚಲಾಗಿದೆ. ಐದು ಬೈಕ್ ಬೆಂಕಿಗಾಹುತಿಯಾಗಿತ್ತು.
ಇದನ್ನೂ ಓದಿ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ; 10 ಜನ ಪೊಲೀಸರ ವಶಕ್ಕೆ
ಇನ್ನು ಘಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಇದೆ ವೇಳೆ ಎಸ್ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲು ಮುರಿದಿತ್ತು. ಈ ಹಿನ್ನೆಲೆ ಘಟನೆಗೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ ಐಆರ್ ದಾಖಲಾಗಿವೆ. ಅದರಲ್ಲೂ ಕಾರ್ಖಾನೆ ಪರ ಬಂದ ಐವರ ವಿರುದ್ಧ ಪೊಲೀಸ್ ಅಧಿಕಾರಿಗಳು ಕೊಲೆ ಯತ್ನ ಎಂದು ಎಫ್ ಐಆರ್ ದಾಖಲಿಸಿದ್ದಾರೆ.
ಐವರು ಜನರ ಪೊಲೀಸ್ ವಶಕ್ಕೆ
ನಂತರ ದಾಖಲಾಗಿರುವ ಎಫ್ ಐಆರ್ 1ರಲ್ಲಿ ಏನಿದೆ ಅಂತ ನೋಡುವುದಾದರೆ, ಸಮೀರವಾಡಿ ಕಾರ್ಖಾನೆಯ ಪರವಾಗಿ ಬಂದಿರುವ 5 ಜನರ ಪೊಲೀಸ್ ಅಧಿಕಾರಿಗಳ ಕೊಲೆಗೆ ಯತ್ನಿಸಿದ ಘಟನೆ ಮಹಾಲಿಂಗಪುರ ಪಿಎಸ್ ಐ ಕಿರಣ ಸತ್ತಿಗೇರಿ ದೂರಿನ ಎಫ್ ಐಆರ್ ದಾಖಲಾಗಿದೆ. ಕರ್ತವ್ಯನಿರತ ಎಸ್ಎಸ್ಪಿ ಮಹಾಂತೇಶ್ವರ ಜಿದ್ದಿ, ಬನಹಟ್ಟಿ ಸಿಪಿಐ ಹೆಚ್ ಆರ್ ಪಾಟೀಲ್, ತೇರದಾಳ ಪಿಎಸ್ಸೈ ಶಿವಾನಂದ ಸಿಂಗನ್ನವರ ಕರ್ತವ್ಯ ನಿರ್ವಹಣೆ ವೇಳೆ ತಳ್ಳಾಟ, ನೂಕಾಟ ಮಾಡಿ ಕಲ್ಲು ತೂರಾಟ ನಡೆಸಿ, ಕೊಲೆ ಮಾಡಲು ಯತ್ನಿಸಿದ್ದ ಪ್ರಭು ತಂಬೂರಿ, ಯಂಕಪ್ಪ ಕೇದಾರಿ, ವಿಠ್ಠಲ ಹೊಸಮನಿ, ದಸ್ತಗಿರಿ ಸಾಬ್ ನದಾಫ್, ಶಿವಲಿಂಗ5 ಶಿಂಧೆ ವಿರುದ್ಧ ಶಿವಲಿಂಗ ಶಿಂಧೆ. ಕಾರ್ಖಾನೆ ಬೆಂಬಲಕ್ಕೆ ಬಂದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ತೂರಾಟ, ಪೊಲೀಸರಿಗೆ ಗಾಯ, ಪೊಲೀಸ್ ವಾಹನ ಜಖಂಗೊಳಿಸಿದ ಹಿನ್ನೆಲೆ ಕಾರ್ಖಾನೆ ಪರವಾಗಿದ್ದ ಗುಂಪಿನ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಎಫ್‌ಐಆರ್ 2ರಲ್ಲಿ ಹೋರಾಟದ ಮುಂದಾಳತ್ವ ವಹಿಸಿದ್ದ ರೈತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ಸುಭಾಷ್ ಶಿರಬೂರ, ಈರಪ್ಪ ಹಂಚಿನಾಳ, ಮುತ್ತಪ್ಪ ಕೋಮಾರ, ಹನುಮಂತ ಗೌಡ ಪಾಟೀಲ್, ದುಂಡಪ್ಪ ಯರಗಟ್ಟಿ, ಬಸಪ್ಪ ಸಂಗಣ್ಣವರ, ಸುರೇಶ್ ಚಿಂಚಲಿ, ಸದಾಶಿವ ಸಕರೆಡ್ಡಿ, ರಾಚಪ್ಪ ಕಲ್ಲೊಳ್ಳಿ, ಗಂಗಾಧರ, ಮೇಟಿ, ಮಹೇಶ್ ಗೌಡ ಪಾಟಿಲ್7 ಪಿಎಸ್ ಐ ಆನಂದ ಸಿಂಗನ್ನವರ ದೂರಿನ ಶಿವ ಸಾರ್ವಜನಿಕ ಆಸ್ತಿ ಹಾನಿಯಡಿ ಎಫ್ ಐಆರ್ ದಾಖಲಿಸಲಾಗಿದೆ.
ಎಫ್‌ಐಆರ್ 3 ಪ್ರಕಾರ ಕಾರ್ಖಾನೆ ಸಿಬ್ಬಂದಿಯಿಂದ ಒಂದು ಎಫ್‌ಐಆರ್ ಆಗಿದೆ. 100 ರಿಂದ 150 ಅಪರಿಚಿತರ ವಿರುದ್ಧ ಕಾರ್ಖಾನೆ ಸಿಬ್ಬಂದಿ ಮಲ್ಲಿಕಾರ್ಜುನ ಗುಗ್ಗರಿ ಎಂಬುವರಿಂದ ಎಫ್ ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 189(2),191(2),191(3),324(4),324(5),190 ಕಾರ್ಖಾನೆ ಆವರಣದೊಳಗೆ ನುಗ್ಗಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಮುಧೋಳದಲ್ಲಿ ರೈತರ ಹೋರಾಟ ಸುಖಾಂತ್ಯ: ರಿಕವರಿ ಪರಿಗಣಿಸಿ ಟನ್ ಕಬ್ಬಿಗೆ 3300 ರೂ. ದರಕ್ಕೆ ಒಪ್ಪಿಗೆ
ಕಿಡಿಗೇಡಿಗಳ ಕೃತ್ಯ ಎಂದು ಸಕ್ಕರೆ ಸಚಿವರು, ಬಾಗಲಕೋಟೆ ಉಸ್ತುವಾರಿ ಸಚಿವರು ತಿಳಿಸಿದ್ದಾರೆ. ಆದ್ದರಿಂದ ರೈತ ಮುಖಂಡರ ಮೇಲೆ ಏಕೆ ಎಫ್ಐಆರ್ ಮಾಡಿದರು. ರೈತರು ಕಿಡಿಗೇಡಿಗಳಾ ಎಂದು ರೈತರು ಗರಂ ಆಗಿದ್ದಾರೆ. ಕೇಸ್ ಹಿನ್ನೆಲೆ ಮುಧೋಳ ಜಿಎಪಿ ಬಿಸಿಐಬಿಯಲ್ಲಿ ಸಭೆ ಮಾಡಿದ ರೈತರು, ಆರೋಪ ತಳ್ಳಿ ಹಾಕಿದ್ದಾರೆ.
ಕಲ್ಲು ಹೊಡೆಯುವವರು, ಬೆಂಕಿ ಹಚ್ಚುವವರು ನಾವಲ್ಲ: ಬಸವಂತಪ್ಪ ಕಾಂಬಳೆ
ಈ ವೇಳೆ ಮಾತಾಡಿದ ರೈತ ಮುಖಂಡ ಬಸವಂತಪ್ಪ ಕಾಂಬಳೆ, 11 ಜನರನ್ನ ಅರೆಸ್ಟ್ ಮಾಡಿದ್ದಾರೆ. ತಕ್ಷಣ ಅವರನ್ನು ಬಿಡುಗಡೆ ಮಾಡಿ. ಮುಧೋಳ ಕಬ್ಬು ಹೋರಾಟ ಇಡೀ ರಾಜ್ಯಕ್ಕೆ ಮಾದರಿ ಹೋರಾಟದ ಉದಾಹರಣೆ ಇದೆ. ಮುಧೋಳ ಹೋರಾಟ ಪ್ರಾರಂಭವಾದರೆ ರಾಜಕಾರಣಿಗಳಿಗೆ ಜ್ವರ ಬರುತ್ತೆ. ಆ ದೃಷ್ಟಿಯಿಂದ ರಾಜಕಾರಣಿಗಳ ತಂತ್ರಗಾರಿಕೆ ಇರಬಹುದು. ಕಾರ್ಖಾನೆಗಳಲ್ಲಿ ಸಾಕಷ್ಟು ಹಿಂಸೆ ನೀಡಲಾಗಿದೆ. ಜನ ಒಪ್ಪುವುದಿಲ್ಲ. ಕಲ್ಲು ಹೊಡೆಯುವವರು ನಾವಲ್ಲ, ಬೆಂಕಿ ಹಚ್ಚುವವರು ನಾವಲ್ಲ. ರೈತರಿಗೆ ನ್ಯಾಯ ಕೊಡಿಸುವ ಹೋರಾಟ ಇದು. ಈ ಘಟನೆಯನ್ನು ಸಂಧಾನ ಮಾಡಿ
ಒಟ್ಟಿನಲ್ಲಿ ರೈತರ ಹೋರಾಟ ವಿಕೋಪಕ್ಕೆ ತಿರುಗಿ ಎಫ್ ಐಆರ್ ದಾಖಲಾಗುವ ಹಂತಕ್ಕೆ ಬಂದಿದೆ. ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಮುಂದೆ ರೈತರು ಯಾವ ಹೆಜ್ಜೆ ಇಡಲಿದ್ದಾರೆ ಎಂಬುದು ಸದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.