ಬಳ್ಳಾರಿ ಗಲಭೆಯಲ್ಲಿ ಮತ್ತೊಂದು ಸ್ಫೋಟಕ ತಿರುವು!
ಬಳ್ಳಾರಿ, ಜನವರಿ 06: ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಇದೀಗ ಆರಂಭಿಕ ದೃಶ್ಯಗಳು ಬಹಿರಂಗವಾಗಿದ್ದು, ಇಡೀ ಗಲಾಟೆಗೆ ಹೊಸ ತಿರುವು ನೀಡಲಾಗಿದೆ. ಗಲಾಟೆ ಆರಂಭಿಸಿದ್ದು ಜನಾರ್ದನ ರೆಡ್ಡಿಗರೆಂಬುದಾಗಿ ಕಾಂಗ್ರೆಸ್ ಬೆಂಬಲಿತ ಆರೋಪಿಸಿದ್ದು, ಇದಕ್ಕೆ ಸಾಕ್ಷಿಯಾಗಿ ಕೆಲವು ದೃಶ್ಯಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಬಿಜೆಪಿಗರು ಹರಿದು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದ ನಂತರ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ಗಲಾಟೆಯಲ್ಲಿ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕಾಣಿಸಿಕೊಂಡಿದ್ದ. ಘಟನೆಯ ಕುರಿತಾಗಿ ಹಲವು ಗೊಂದಲ ಉಂಟಾಗಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಗಲಾಟೆಗೆ ಸಂಬಂಧಿಸಿದ ಹಲವು ವೀಡಿಯೋಗಳು ಹೊರಬಂದಿವೆ.
ಉದ್ದೇಶಪೂರ್ವಕವಾಗಿ ಬ್ಯಾನರ್ ಕಿತ್ತ ಬಿಜೆಪಿಗರು
ದೃಶ್ಯಗಳಲ್ಲಿರುವಂತೆ ಜನಾರ್ದನ ರೆಡ್ಡಿ ಮನೆ ಕಾಂಪೌಂಡ್ ಹೊರಭಾಗದಲ್ಲಿ ವಾಲ್ಮೀಕಿ ಸಮುದಾಯದ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಅಳವಡಿಸಿದ್ದರು. ರಸ್ತೆ ಬದಿಯಲ್ಲಿ ಅಳವಡಿಸಿದ್ದ ಈ ಬ್ಯಾನರ್ ಉದ್ದೇಶಪೂರ್ವಕವಾಗಿ ರೆಡ್ಡಿಗರು ಕಿತ್ತು ಹಾಕಿದ್ದಾರೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿಯೇ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಮತ್ತೆ ಅದೇ ಜಾಗದಲ್ಲಿ ಬ್ಯಾನರ್ ಅಳವಡಿಸಲು ಮುಂದಾದಾಗ ಗಲಾಟೆ ತೀವ್ರಗೊಂಡಿತ್ತು. ಹೀಗೆ ಕ್ಷಣಾರ್ಧದಲ್ಲಿ ಎರಡೂ ಕಡೆಯಿಂದ ಸಾವಿರಾರು ಜನ ಸೇರಿ ಪರಿಸ್ಥಿತಿ ಗಲಭೆಯಾಗಿ ಮಾರ್ಪಟ್ಟಿದ್ದು, ತಳ್ಳಾಟ- ನೂಕಾಟ ಏರ್ಪಟ್ಟಿತ್ತು.
ಇದನ್ನೂ ಓದಿ ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್ ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ
ತೊಡೆತಟ್ಟಿ ಗಲಾಟೆಗೆ ಪ್ರಚೋದನೆ ನೀಡಿದ್ದ ಮಹಿಳೆ
ಈ ನಡುವೆ ಬಿಜೆಪಿ ಕಾರ್ಯಕರ್ತೆಯೊಬ್ಬರು ತೊಡೆತಟ್ಟಿ ಗಲಾಟೆಗೆ ಪ್ರಚೋದನೆ ನೀಡಿದ ವೀಡಿಯೋವೊಂದು ವೈರಲ್ ಆಗಿದೆ. ಎರಡು ಪಕ್ಷಗಳ ಬೆಂಬಲಿಗರ ನಡುವೆ ಗಲಭೆ ಏರ್ಪಟ್ಟಾಗಲೇ ಈ ಘಟನೆ ನಡೆದಿದ್ದು, ಆಕೆಯನ್ನು ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ಅದರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಖಾರದ ಪುಡಿ ಎರಚಿದ್ದು, ಉರಿ ತಾಳದ ವ್ಯಕ್ತಿ ಮೈಮೇಲೆ ನೀರು ಹಾಕಿಕೊಂಡ ದೃಶ್ಯಗಳೂ ಸಹ ಹೊರಬಂದಿವೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.