ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ


ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್

ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (ಕಾಂಗ್ರೆಸ್) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (ಬಳ್ಳಾರಿ) ಶಾಸಕ ಜನಾರ್ದನ ರೆಡ್ಡಿ (ಜನಾರ್ದನ ರೆಡ್ಡಿ) ಮನೆ ಎದುರು ನಡೆದಿದೆ. ಜನವರಿ 3 ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸಲು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕಾಣಿಸಿಕೊಂಡಿದ್ದಾರೆ.

ಕಾಂಗ್ರೆಸ್ಸಿಗರು ಜನಾರ್ದನ ರೆಡ್ಡಿ ಬೆಂಬಲಿಗರ ವಿರುದ್ಧ ಬೊಟ್ಟು ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಗಲಭೆ ನಿಯಂತ್ರಿಸಲು ಪೊಲೀಸರು ಕೂಡ ಏರ್ ಫೈಯರ್ ಮಾಡಿದ್ದಾರೆ.

ಅಸಲಿಗೆ ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದಿದ್ದೇನು?

ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುವಂತೆ ಗಲಾಟೆಯಾಗಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಟ್ಟಿದ್ದ ಬ್ಯಾನರ್ ಬಿಜೆಪಿಗರು ಹರಿದು ಆಕ್ರೋಶ ವ್ಯಕ್ತಪಡಿಸಿದರು. ವಿಷಯ ಗೊತ್ತಾದ ಕೂಡಲೇ ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಧಾವಿಸಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ಜೋರಾಗಿದೆ. ಗಲಾಟೆ ತೀವ್ರವಾಗುತ್ತಿದ್ದಂತೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಲ್ಲಿ ಗುಂಡು ಹಾರಿಸಿದ್ದಾರೆ. ಸಂಘರ್ಷ ಜೋರಾಗದಿಂದ ಪರಸ್ಪರ, ಎರಡೂ ಕಡೆಯ ಬೆಂಬಲಿಗರು ಕಲ್ಲು ತೂರಾಟ. ಈ ವಿಚಾರ ಗೊತ್ತಾದ ಕೂಡಲೇ ಶಾಸಕ ನಾರಾ ಭರತ್ ರೆಡ್ಡಿ ಘಟನಾ ಸ್ಥಳಕ್ಕೆ ತೆರಳಲು ಸಿದ್ಧರಾಗಿದ್ದಾರೆ. ಈ ಮಾಹಿತಿ ತಿಳಿದ ಜನಾರ್ದನ ರೆಡ್ಡಿ ಬೆಂಬಲಿಗರು, ಕೈಯಲ್ಲಿ ದೊಣ್ಣೆ ಹಿಡಿದು ನಿಂತಿದ್ದಾರೆ.

ಪರಿಸ್ಥಿತಿ ಕೈ ಮೀರಿ ಹೋಗುತ್ತಿರುವುದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಲಭೆಯ ನಡುವೆ ಗುಂಡೊಂದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರಿಗೆ ತಗುಲಿದೆ, ಅನಾರೋಗ್ಯ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಸಕ ಭರತ್ ರೆಡ್ಡಿ ಬೆಂಬಲಿಗ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅಸುನೀಗಿದ್ದಾರೆ.

ನನ್ನ ಹತ್ಯೆಗೆ ಸಂಚು: ಜನಾರ್ದನ ರೆಡ್ಡಿ ಆರೋಪ

ಘಟನೆ ವೇಳೆ ಸಿಡಿದ ಗುಂಡನ್ನು ಶಾಸಕ ಜನಾರ್ದನರೆಡ್ಡಿ ಪ್ರದರ್ಶಿಸಿದ್ದಾರೆ. ಇದು ನನ್ನ ಹತ್ಯೆಗೆ ಸಂಚು ಎಂದು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಶಾಸಕ ಭರತ್ ರೆಡ್ಡಿ, ನನ್ನ ಮುಂದೆ ಇಂಥಾ ಚಿಲ್ಲರೆ ರಾಜಕೀಯ ನಡೆಯಲ್ಲ. ಜನಾರ್ದನರೆಡ್ಡಿ ಹತ್ಯೆಗೆ ಸಂಚು ಮಾಡುವ ಅಗತ್ಯ ನನಗಿಲ್ಲ. ಜನಾರ್ದನ ರೆಡ್ಡಿ ಏನು ದೊಡ್ಡ ಪಾಳೆಗಾರನಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಲಾಗಿದೆ; ಜನಾರ್ದನ ರೆಡ್ಡಿ ಆರೋಪ

ಘಟನೆ ಬಗ್ಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಶಾಸಕ ಭರತ್ ರೆಡ್ಡಿಯಿಂದ ಮಾಹಿತಿ ಪಡೆದು ಕೊಂಡಿದ್ದಾರೆ. ಇನ್ನು ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಘಟನಾ ಸ್ಥಳದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜನಾರ್ದನ ರೆಡ್ಡಿ ಅವರನ್ನು ಬಂಧಿಸುವಂತೆ ಅವರ ನಿವಾದೆದುದುರೇ ಶಾಸಕ ಭರತ್ ರೆಡ್ಡಿ ಠಿಕಾಣಿ ಹೂಡಿದ್ದಾರೆ, ಇತ್ತ ಶ್ರೀರಾಮುಲು ರೆಡ್ಡಿ ನಿವಾಸದಲ್ಲೇ ಉಳಿದುಕೊಂಡಿದ್ದಾರೆ.

ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಘಟನೆ ಸಂಬಂಧ ಶಾಸಕ ಜನಾರ್ದನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಅಲಿಖಾನ್, ದಮ್ಮೂರ ಶೇಖರ್ ಸೇರಿ 11 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *