
ಬಳ್ಳಾರಿ, ಮಾ.25: ನಗರದ ಮೋತಿ ವೃತ್ತದ ಬಳಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ಸು ವೇಗವಾಗಿ ಸಾಗಿ, ರಸ್ತೆ ಬದಿಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ನಂತರ ಹಣ್ಣಿನ ಅಂಗಡಿ, ಟೀ ಅಂಗಡಿ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಫ್ರೂಟ್ಸ್ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಜೊತೆಗೆ, ಅಪಘಾತಕ್ಕೆ ಸಿಲುಕಿದ ಆಟೋರಿಕ್ಷಾ ಕೂಡ ಜಖಂಗೊಂಡಿದೆ. ಘಟನೆಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದು ದೊಡ್ಡ ಅನಾಹುತವನ್ನು ತಪ್ಪಿಸಿದೆ ಎಂದು ಸ್ಥಳೀಯರು. ಬಳ್ಳಾರಿ ನಗರ ಸಂಚಾರ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ. ಅಪಘಾತಕ್ಕೆ ಕಾರಣವಾದ ನಿಖರ ಕಾರಣಗಳ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ