Headlines

ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್

ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್


ಬಳ್ಳಾರಿ, ಜ.3: ಬಳ್ಳಾರಿ (ಬಳ್ಳಾರಿ) ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ-ಯುವತಿಯ ವಿರುದ್ಧ ನಡೆದ ವಿಚಾರಧಾರೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ಎಫ್ ಐಆರ್ ದಾಖಲು ಮಾಡಿದ್ದಾರೆ. ಬಳ್ಳಾರಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿದಂತೆ ಹಲವರ ಹೆಸರನ್ನು ಎಫ್ ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲು ಮಾಡಲಾಯಿತು.

ನೆನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಿದ್ದಾರೆ. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ದಾಖಲಾಗಿದೆ. ಮತ್ತೊಂದೆಡೆ ಅಕ್ರಮ ಪ್ರವೇಶ, ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ಸೇರಿಸಿದ್ದಾರೆ. ಇನ್ನು ಈ ದೂರು ನೀಡುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಇದ್ದಾರೆ. ಎಸ್ ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು, ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!

ಇನ್ನು ಈ ಗಲಾಟೆಯಿಂದ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಿಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಇನ್ನು ಇದರೊಂದಿಗೆ ಬಿಜೆಪಿ ನಾಯಕರಿಗೆ ಹೈಕಮಾಂಡ್‌ನಿಂದ ಮಹತ್ವದ ಸೂಚನೆ ಕೂಡ ನೀಡಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಹೇಳಿದ್ದಾರೆ. ಇಂದು ಬಳ್ಳಾರಿಗೆ ಬಿಜೆಪಿ ನಾಯಕರ ನಿಯೋಗ ಭೇಟಿ ಸಾಧ್ಯತೆ ಎಂದು ಹೇಳಲಾಗಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 7:35 am, ಶನಿ, 3 ಜನವರಿ 26



Source link

Leave a Reply

Your email address will not be published. Required fields are marked *