Headlines

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ


ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ!

ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ಏಳುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಆತಂಕ ಸೃಷ್ಟಿ ವಹಿಸಲು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ದೆಹಲಿಯಂತಾಗುತ್ತಾ ಪರಿಸ್ಥಿತಿ?

ಕೆಲವು ದಿನಗಳಿಂದ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಸೂಚಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿದೆ. ಬೆಂಗಳೂರಿನಲ್ಲೂ ಕಡಿಮೆ ಆಗಿರುವ AQI, ಇಂದು 192ಕ್ಕೆ ತಲುಪಿದೆ.ಕಳೆದ ಕೆಲವು ದಿನಗಳಿಗೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿ ಉಳಿದಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲು ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

PM10 ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲು ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿದೆ. ಆರೋಗ್ಯ ತಜ್ಞರು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಮಾಸ್ಕ್ ಬಳಕೆ, ವಾಹನ ಬಳಕೆ ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ವಸ್ತುಗಳಿಗೆ ಇಂದಿನ ಗಾಳಿಯ ಗುಣಮಟ್ಟ (ಏರ್ ಗುಣಮಟ್ಟ ಸೂಚ್ಯಂಕ)

  • ಬೆಂಗಳೂರು –192
  • ಮಂಗಳೂರು-170
  • ಮೈಸೂರು –140
  • ಬೆಳಗಾವಿ – 102
  • ಕಲಬುರ್ಗಿ-126
  • ಶಿವಮೊಗ್ಗ – 69
  • ಬಳ್ಳಾರಿ – 222
  • ಹುಬ್ಬಳ್ಳಿ- 148
  • ಉಡುಪಿ –168
  • ವಿಜಯಪುರ –153

ಗಾಳಿಯ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *