ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕಾನಿಂಗ್ ಮಶಿನ್!
ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (ವಿಕ್ಟೋರಿಯಾ ಆಸ್ಪತ್ರೆ) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನ ಎನ್ಆರ್ಐ ಸ್ಕ್ಯಾನ್ನಿಂದ ಕಾರ್ಯನಿರ್ವಹಿಸುವ ನೂರಾರು ರೋಗಿಗಳ ಬಿಲ್ಡಿಂಗ್ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ.
ಮೂರೂ ಯಂತ್ರಗಳು ಖರಾಬು!
ವೈದ್ಯಕೀಯ ಶಿಕ್ಷಣ ಇಲಾಖೆಗೆ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಹಾಳಾಗಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಹಾಗೂ ಪಿಎಂಎಸ್ಎಸ್ವೈ ಸೇರಿ ಮೂರು ಆಸ್ಪತ್ರೆಗಳಿಗೆ ಕೇವಲ ಮೂರು ಸ್ಕ್ಯಾನಿಂಗ್ ಯಂತ್ರಗಳಷ್ಟೇ ಲಭ್ಯವಿವೆ. ಒಂದು ಯಂತ್ರ ಎಸಿ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಇದರಿಂದ ಉಳಿದ ಎರಡು ಯಂತ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ, ಸ್ಕ್ಯಾನಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.
ಎರಡು ದಿನಗಳಿಂದ ಸ್ಕೇನಿಂಗ್ ಕೌಂಟರ್ ಬಳಿ ಬಂದು ಹಿಂತಿರುಗುತ್ತಿರುವ ರೋಗಿಗಳ ಅಸಮಾಧಾನ. ತುರ್ತು ಚಿಕಿತ್ಸೆಗಾಗಿ ಸ್ಕ್ಯಾನಿಂಗ್ ಅಗತ್ಯವಿರುವ ರೋಗಿಗಳ ವರದಿಗಳು ತಡವಾಗಿ ಕೈ ಸೇರುವ ಆರೋಗ್ಯ ಸೇವೆಗಳ ಕುರಿತು ಪ್ರಶ್ನೆಗಳು ಎದ್ದಿವೆ. ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಸಾರ್ವಜನಿಕರು ಇದ್ದಾರೆ.
ಇದನ್ನೂ ಓದಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ; ಸರ್ಕಾರದ ವಿರುದ್ಧ ಜನಾಕ್ರೋಶ!
ಜಿಲ್ಲಾಸ್ಪತ್ರೆಯಲ್ಲಿ ಇದೆ ಪಾಡು!
ಇತ್ತ ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳು ಸ್ಥಗಿತಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಇಲಾಖೆ ಸುಮಾರು 143 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದೇ ಸಮಸ್ಯೆಗೆ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಸೌಲಭ್ಯಗಳ ಕೊರತೆಯಿಂದ ಬಡ ರೋಗಿಗಳ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆರೋಗ್ಯ ಇಲಾಖೆಯಿಂದ ಸುಮಾರು 140 ಕೋಟಿ ರೂ ಬಿಲ್ ಬಾಕಿ ಉಳಿದ ಹಿನ್ನೆಲೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡ ರೋಗಿಗಳ ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಸರ್ಕಾರದ ಬಾಕಿ ಪಾವತಿ ವಿಳಂಬದ ಕಾರಣ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಸ್ಕ್ಯಾನ್ ಸೇವೆಯನ್ನು ಬಂದ್ ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಸರ್ಜನ್ ಮನವಿ ಮಾತ್ರ ಸ್ಕ್ಯಾನಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ. ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ KRSNAA ಡಯಾಗ್ನೋಸ್ಟಿಕ್ ಸೆಂಟರ್ಗಳು 143 ಕೋಟಿ ಬಾಕಿ ಸೇವೆಯನ್ನು ನಿಲ್ಲಿಸಿವೆ. ಸಿಟಿ, ಎಂಆರ್ಐ ಸೌಲಭ್ಯಗಳಿಲ್ಲದೆ ಪರ್ಯಾಯ ಸಂಕಷ್ಟದಲ್ಲಿದ್ದು, ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 11:24 am, ಶನಿ, 21 ಫೆಬ್ರವರಿ 26