ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (ದರೋಡೆ). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿಯಲ್ಲಿ ನಡೆದ ಘಟನೆ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (ಬಂಧನ).
ಬಂಧಿತರು
ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದದರೋಡೆ ಪ್ರಕರಣಗಳು: ಬೆಂಗಳೂರಿನಲ್ಲಿ ಗನ್ ತೋರಿಸಿ ಬಂಗಾರದ ಅಂಗಡಿ ಲೂಟಿ
ಕಳೆದ ವಾರವಷ್ಟೇ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸಪುರದ ರಾಮ್ ದೇವ್ ಜ್ಯವೆಲರ್ಸ್‌ನಲ್ಲಿ ಈ ಭಯಾನಕ ದರೋಡೆ ನಡೆದಿತ್ತು. ದರೋಡೆಕೋರರು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಐವರು ಆರೋಪಿಗಳನ್ನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದರೋಡೆ ಪಕ್ಕಾ ಪ್ಲ್ಯಾನ್
ಇನ್ನು ಈ ಆರೋಪಿಗಳಲ್ಲಿ ಅಂಕಿತ್ತ ಮಾದನಾಯಕನಹಳ್ಳಿ ವಾಸವಿದ್ದ. ಕಚೋರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಎಷ್ಟು ದಿನ ಈ ರೀತಿ ಜೀವನ ಸಾಗಿಸುವುದು ಎಂದು ನಿರ್ಧರಿಸಿದ್ದ ಆತ ದರೋಡೆ ಪ್ಲ್ಯಾನ್ ಮಾಡಿದ್ದ. ಈತನಿಗೆ ರವಿ ಎಂಬಾತ ಸಾಥ್ ನೀಡಿದ್ದ. ರವಿ ರಾಜಸ್ಥಾನದಲ್ಲಿದ್ದು, ಆತನ ಬಳಿ ಪಿಸ್ತೂಲ್ ಕೂಡ ಇತ್ತು. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದರು.
ಪ್ಲ್ಯಾನ ಪ್ರಕಾರ ಜನವರಿ 27 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ರಾಮ್ ದೇವ್ ಜ್ಯುವೆಲರ್ಸ್ ಗೆ ನುಗಿದ್ದ ದರೋಡೆಕೋರರು ಗನ್ ತೋರಿಸಿ ಜ್ಯೂವೆಲ್ಲರಿ ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದರು. ಖದೀಮರ ಕೈಚಲಕ ಸಿಸಿಟಿ ಟಿವಿಯಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಲಾಗಿತ್ತು.
ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ!
ಒಟ್ಟಿನಲ್ಲಿ ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಇದೀಗ ಎಲ್ಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನ ಕಸ್ಟಡಿಗೆ ಪಡೆದಿರುವ ಮಾದನಾಯಕನಹಳ್ಳಿ ಪೋಲಿಸರು ವಿಚಾರಣೆ.
ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.