ಕೋಲಾರ, ಜ.22: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ದರ್ಗಾ ಮೈದಾನದಲ್ಲಿ ನಡೆಯುತ್ತಿರುವ ಉರುಸ್ ಮೆರವಣಿಗೆ ವೇಳೆ ನೈತಿಕ ಪೊಲೀಸ್‌ಗಿರಿ ಘಟನೆ ವರದಿಯಾಗಿದೆ.ಮುಸ್ಲಿಂ ಯುವತಿ ಇದ್ದ ಯುವಕರು ಎಂಬ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕರು ಹಿಂದೂ ಯುವಕರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಮುಸ್ಲಿಂ ಯುವಕ-ಯುವತಿಯರ ಜೊತೆಗಿದ್ದ ಹಿಂದೂ ಯುವಕರ ಮೇಲೆ ದಾಳಿ ನಡೆದಿದೆ. ಘಟನೆ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಜಹೀದ್, ಅಬೀದ್ ಅಹ್ಮದ್, ಶೇಕ್ ಸಕೀಬ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈವರೆಗೆ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ತನ್ನ ಅಣ್ಣ ರಫೀಶಿಯೊಂದಿಗೆ ಇದ್ದ ರಾಹುಲ್, ಪುರುಷೋತಮ್, ಲಾವಣ್ಯ ಮತ್ತು ಸಂಜಯ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೆಸರಿಸಲಾಗಿದೆ.ಘಟನೆಯ ಮಾಹಿತಿ ಪಡೆದ ಬಳಿಕ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ