
2026ರ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಕಣಕ್ಕಿಳಿಯುವುದೆಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಏಕೆಂದರೆ ಭಾರತದಲ್ಲಿ ನಡೆಯಲಿರುವ ಟಿ20 ನಲ್ಲಿ ಕಣಕ್ಕಿಳಿಯಲು ಬಾಂಗ್ಲಾದೇಶ ಹಿಂದೇಟು ಹಾಕಿದೆ. ಬದಲಾಗಿ ನಮ್ಮ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಇದಾಗ್ಯೂ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ತನ್ನ ನಿಲುವು ಬದಲಿಸಿಲ್ಲ.
ಕೆಲವು ದಿನಗಳ ಹಿಂದೆಯೇ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾದೇಶ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡಲಾಯಿತು. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಹತ್ಯೆಯನ್ನು ಖಂಡಿಸಿ ಇತ್ತೀಚೆಗೆ ಭಾರತದಲ್ಲಿ ಪ್ರತಿಭಟನೆಗಳು ನಡೆದಿವೆ.
ಈ ಪ್ರತಿಭಟನೆ ವೇಳೆ ಬಾಂಗ್ಲಾದೇಶ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಕೆಕೆಆರ್ ಪರ ಕಣಕ್ಕಿಳಿಯಲು ಬಿಡುವುದಿಲ್ಲ ಎಂದು ಕೆಲ ಸಂಘಟನೆಗಳು ಘೋಷಿಸಿದ್ದವು. ಹೀಗಾಗಿ ಐಪಿಎಲ್ ನಿಂದ ಬಾಂಗ್ಲಾ ವೇಗವನ್ನು ಕೈ ಬಿಡುವಂತೆ ಬಿಸಿ ಮಾಹಿತಿ ಸೂಚಿಸಿತ್ತು. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ.
ಬಾಂಗ್ಲಾದೇಶ ಆಟಗಾರನನ್ನು ಐಪಿಎಲ್ ನಿಂದ ಕೈ ಬಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಟಿ20 ತನ್ನ ತಂಡದ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದೆ. ಭಾರತದಲ್ಲಿ ಆಟಗಾರನಿಗೆ ಸಂಪೂರ್ಣ ಸುರಕ್ಷತೆ ನೀಡಲು ಸಾಧ್ಯವಾಗದಿದ್ದರೆ, ಬಿಸಿ ಮಾಡಲು ಹೇಗೆ ಬಾಂಗ್ಲಾದೇಶ ತಂಡಕ್ಕೆ ಭದ್ರತಾ ವ್ಯವಸ್ಥೆ ಕಲ್ಪಿಸಲಿದೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
ಹೀಗಾಗಿ ಬಾಂಗ್ಲಾದೇಶ ತಂಡದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಿರ್ವಹಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಐಸಿಸಿಗೆ ಮನವಿ ಮಾಡಿದೆ. ಬಿಸಿಬಿಯ ಈ ಮನವಿಯನ್ನು ಕೇಳಲಾಗಿದೆ, ಭಾರತದಲ್ಲೇ ಆಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಪಂದ್ಯದಿಂದ ವಾಕ್ ಪಡೆಯಿರಿ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ. ಇದಾಗ್ಯೂ ಭಾರತದಲ್ಲಿ ಟಿ20 ಕಾಣಿಸಿಕೊಳ್ಳಲು ಬಾಂಗ್ಲಾದೇಶ ಒಪ್ಪಿಲ್ಲ.
ಈ ಬಗ್ಗೆ ಮಾತನಾಡಿರುವ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಡಾ. ಆಸಿಫ್ ನಜ್ರುಲ್, ಪ್ರಶ್ನೆ ಕೇವಲ ಭದ್ರತೆಯ ಬಗ್ಗೆ. ಈ ವಿಷಯದಲ್ಲಿ ದೇಶದ ಘನತೆಯ ಕೂಡ ಇದೆ. ಹೀಗಾಗಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಶ್ರೀಲಂಕಾದಲ್ಲಿ ಬಾಲಾದೇಶ್ ಪಂದ್ಯವನ್ನು ಆಯೋಜಿಸಲು ಮತ್ತೊಮ್ಮೆ ಐಸಿಸಿಗೆ ಮನವಿ ಮಾಡಲು ಅವಕಾಶವಿದೆ.
ಭಾರತದಲ್ಲಿ ಬಾಂಗ್ಲಾದೇಶಿ ಕೆಟಿಗರ ಭದ್ರತಾ ಸಮಸ್ಯೆಯ ಕ್ರಿ ಐಸಿಸಿ ಸಂಪೂರ್ಣವಾಗಿ ಅರಿತುಕೊಂಡಿಲ್ಲ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಬಾಂಗ್ಲಾದೇಶ ಆಟಗಾರನನ್ನು ಕೈ ಬಿಡುವ ಮೂಲಕ ಅವರು ಬಾಂಗ್ಲಾದೇಶ ತಂಡವು ಭಾರತದಲ್ಲಿ ಆಡುವುದು ಸುರಕ್ಷಿತವಲ್ಲ ಎಂದು ಹೇಳಿದ್ದಾರೆ. ಇದಾಗ್ಯೂ ಐಸಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ನಜ್ರುಲ್ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಟೀಮ್ ಇಂಡಿಯಾ ಆಟಗಾರನಿಗೆ ಶಸ್ತ್ರಚಿಕಿತ್ಸೆ… ತಂಡದಿಂದ ಔಟ್..!
ಬಾಂಗ್ಲಾದೇಶ ಆಟಗಾರನನ್ನು ಐಪಿಎಲ್ ಪ್ರದರ್ಶನದಿಂದ ಹೊರಹಾಕುವ ಮೂಲಕ ಅವರು ಅವಮಾನ ಮಾಡಿದ್ದಾರೆ. ಹೀಗಾಗಿ ಭಾರತದಲ್ಲಿ ಆಡುವುದು ಇದು ಕೇವಲ ಭದ್ರತಾ ಸಮಸ್ಯೆಯಲ್ಲ. ನಮ್ಮ ದೇಶದ ಘನತೆಯ ವಿಷಯವೂ ಆಗಿದೆ. ಭಾರತವು ಬಾಂಗ್ಲಾದೇಶವನ್ನು ಅವಮಾನಿಸಿದೆ. ಈ ಅವಮಾನದ ಕಾರಣ ನಮ್ಮ ತಂಡ ಭಾರತದಲ್ಲಿ ಆಡಬಾರದು ಎಂಬುದು ನನ್ನ ನಿಲುವು ಎಂದು ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಡಾ. ಆಸಿಫ್ ನಜ್ರುಲ್ ಹೇಳಿದ್ದಾರೆ.