Headlines

‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!

‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!


'ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ': ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ದೌರ್ಜನ್ಯದ ಆರೋಪ!

ಬೆಂಗಳೂರು, ಏಪ್ರಿಲ್ 07: ಧಾರ್ಮಿಕ ಮುಖಂಡರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆರೋಪಿ ದೌರ್ಜನ್ಯ (ಕಿರುಕುಳ) ಹಾಗೂ ಮಾನಸಿಕ ಶೋಷಣೆಯ ಆರೋಪ ಮಾಡಿ ದೂರು ಸಲ್ಲಿಸಿದ್ದಾರೆ.

ಮಹಿಳೆಯ ದೂರಿನಲ್ಲೇನಿದೆ?

‘ನಾನು ಸ್ವಾಮೀಜಿ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ಪ್ರತಿ ನನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ, ರಾತ್ರಿ ಫೋನ್ ಮಾಡಿ
ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇನೆ ಎಂದು ಬೆದರಿಸುತ್ತಿದ್ದೇನೆ.ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮುಖ್ಯಮಂತ್ರಿ, ಗೃಹ ಸಚಿವರಿಗೂ ದೂರು ಸಲ್ಲಿಕೆ

ಈ ಕುರಿತು ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕು ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ. ಪ್ರಸ್ತುತ ಈ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಆರೋಪಗಳು ಯಾರನ್ನೂ ತಪ್ಪಿತಸ್ಥರಾಗಿ ಪರಿಗಣಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆಯ ವರದಿ ಹೊರಬರುವುದನ್ನು ಕಾದು ನೋಡಲಾಗುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *