ನಟಿ ಸ್ಪಂದನಾ ಸೋಮಣ್ಣ (ಸ್ಪಂದನ ಸೋಮಣ್ಣ) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿದೆ. ಕಿರುತೆರೆ ಧಾರಾವಾಹಿಗಳ ಮೂಲಕವೂ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರ ರಿಯಲ್ ಲೈಫ್ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ತಿಳಿದಿಲ್ಲ. ಈ ವಾರ ಬಿಗ್ ಬಾಸ್ (BBK 12) ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಫ್ಯಾಮಿಲಿ ಸದಸ್ಯರು ಬಿಗ್ ಬಾಸ್ ಮನೆಗೆ ಬಂದು ಮಾತನಾಡುತ್ತಿದ್ದಾರೆ. ಸ್ಪಂದನಾ ಅವರ ಪರವಾಗಿ ಕೂಡ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ. ಮಗಳ ಬಾಲ್ಯದಲ್ಲಿ ನಡೆದ ಒಂದು ಶಾಕಿಂಗ್ ಘಟನೆಯನ್ನು ಅವರು ವಿವರಿಸಿದ್ದಾರೆ. ಡಿಸೆಂಬರ್ 26 ರ ಸಂಚಿಕೆಯ ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.