
ನ್ಯಾಯಕ್ಕಾಗಿ ಸಂತ್ರಸ್ತ ಯುವತಿಯು ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ವಿರುದ್ಧ ಅತ್ಯಾ*ಚಾರ (Rape), ವಂಚನೆ (Cheating) ಮತ್ತು ಬೆದರಿಕೆ ಹಾಕಿದ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಡಿಜಿಟಲ್ ಯುಗದಲ್ಲಿ ಅಪರಿಚಿತರೊಂದಿಗೆ ಸ್ನೇಹ ಬೆಳೆಸುವಾಗ ಎಚ್ಚರಿಕೆ ವಹಿಸಬೇಕು ಎಂಬುದಕ್ಕೆ ಈ ಘಟನೆ ಒಂದು ಕನ್ನಡಿಯಾಗಿದೆ. ಸದ್ಯ ಆರೋಪಿ ಜೈಲು ಪಾಲಾಗಿದ್ದು, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಭರವಸೆಯನ್ನು ಪೊಲೀಸ್ ಇಲಾಖೆ ನೀಡಿದೆ.